ನನ್ನ ಹೇಳಿಕೆಯ ಬಗ್ಗೆ ಅನ್ಯ ಅರ್ಥ ಬೇಡ : ಹೆಚ್.ಡಿ.ಕುಮಾರಸ್ವಾಮಿ

Team Udayavani, Jan 27, 2022, 3:45 PM IST

jds

ಬೆಂಗಳೂರು: ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಮನೆ ಬಾಗಿಲಿಗೆ ಅಧಿಕಾರಕ್ಕಾಗಿ ಈವರೆಗೆ ಹೋಗಿಲ್ಲ. ಇನ್ನು ಮುಂದೆಯೂ ಹೋಗುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಪಕ್ಷದ ನೂತನ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗಾರೊಂದಿಗೆ ಮಾತನಾಡಿ, ಅತಂತ್ರ ವಿಧಾನಸಭೆ ನಿರ್ಮಾಣವಾದಾಗ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬಂದಿವೆ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ‌ ಗುರಿ ತಲುಪಲು ಶ್ರಮಿಸುತ್ತೇವೆ ಎಂದರು.

2023ಕ್ಕೆ ಕಾರ್ಯಕರ್ತರ ಶ್ರಮ ಸಾಬೀತು ಮಾಡುತ್ತೇವೆ. ಆಗ ಜೆಡಿಎಸ್ ಗೆ ಶಕ್ತಿ ಏನು, ಜೆಡಿಎಸ್ ಬಿಟ್ಟು ಏನು ಮಾಡಲು ಆಗಲ್ಲ ಎಂದಷ್ಟೇ ಹೇಳಿದ್ದೆ. ಅಂದರೆ ಬೇರೆ ಪಕ್ಷಗಳು ಕಡಿಮೆ ಸ್ಥಾನ ಗೆದ್ದರೆ ಅವರ ಜತೆ ಸೇರಿ ಅಧಿಕಾರ ಮಾಡುತ್ತೇವೆ ಎಂದಲ್ಲ. ನನ್ನ ಹೇಳಿಕೆಯ ಬಗ್ಗೆ ಅನ್ಯ ಅರ್ಥ ಬೇಡ. ಜನರಿಗೆ ತಪ್ಪು ಸಂದೇಶ ಹೋಗುವುದು ಬೇಡ ಎಂದರು.

ಕೊರೊನಾ ಇರುವ ಕಾರಣಕ್ಕೆ ಪಕ್ಷ ಸಂಘಟನೆಗೆ ವೇಗ‌ ನೀಡಿಲ್ಲ. ಕೆಲ ಕಾಲ ಸಂಘಟನೆಯ ಕೆಲಸ ನಿಂತಿತ್ತು. ನಮ್ಮ ಸಂಘಟನೆಯ ಚಟುವಟಿಕೆಗಳಿಂದ ಜನರಿಗೆ ತೊಂದರೆ ಆಗಬಾರದು ಎಂದು ಸಂಘಟನೆಗೆ ಹೆಚ್ಚು ಒತ್ತು ಕೊಟ್ಟಿಲ್ಲ.‌ ಆದರೆ ಆಂತರಿಕವಾಗಿ ಪಕ್ಷ ಸಂಘಟನೆ ಕಾರ್ಯ ಮಾಡುತ್ತಿದ್ದೇವೆ ಎಂದರು.

ಮುಖ್ಯಮಂತ್ರಿಗೆ ಟಾಂಗ್

ಬೇರೆ ಪಕ್ಷಗಳು ಅಂತಂತ್ರ ಆದಾಗ ಜೆಡಿಎಸ್ ಸ್ವತಂತ್ರವಾಗುತ್ತದೆ. ಅದು ಕುಮಾರಸ್ವಾಮಿ ಅವರ ಸದಾಶಯ ಆಗಿರಬಹುದು ಎಂದು‌ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದ್ದಾರೆ. ನಾವೆಂದೂ ಅತಂತ್ರರಾಗಿಲ್ಲ. ಅವರೇ ಅಂತಂತ್ರವಾದಾಗ ಜೆಡಿಎಸ್ ಬಾಗಿಲು ಬಡಿದಿದ್ದಾರೆ.‌ ಅವರ ಶಾಸಕರು, ಸಚಿವರು ಸಿದ್ದರಾಮಯ್ಯ ಸಂಪರ್ಕದಲ್ಲಿ ಇದ್ದಾರೆ ಎಂದರೆ, ಅಂಥವರಿಗೆ ಬಿಜೆಪಿ‌ ನಾಯಕರಲ್ಲೇ ಕಡಿವಾಣ ಹಾಕುವ ಸ್ಥಿತಿ ಇಲ್ಲ.‌ ಆದರೆ ಗೊಂದಲ ಸೃಷ್ಟಿ ಮಾಡುವುದಕ್ಕೆ ನಾವು ಎಲ್ಲೂ ಅವಕಾಶ ಕೊಟ್ಟಿಲ್ಲ.‌ ಅವರನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಲಿಕ್ಕೆ ಬಿಜೆಪಿಗೆ ಸಾಧ್ಯ ಆಗಿಲ್ಲ ಎಂದರು.

ಸಿಎಂ ಇಬ್ರಾಹಿಂ ಬಂದರೆ ಸ್ವಾಗತ

ಮಾಜಿ ಸಚಿವ ಸಿಎಂ ಇಬ್ರಾಹಿಂ ಪಕ್ಷಕ್ಕೆ ಬಂದರೆ ಸ್ವಾಗತ. ಇಬ್ರಾಹಿಂ ಅವರು ಹಿರಿಯರಿದ್ದಾರೆ.‌ ನಮ್ಮ ಪಕ್ಷ ಹಾಗೂ ಮಾಜಿ ಪ್ರಧಾನಿಗಳಾದ ದೇವೇಗೌಡರ ಏಳು ಬೀಳುವಿನಲ್ಲಿಯೂ ಜತೆಯಾದವರು.‌ ಮೇಲ್ಮನೆ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ‌ ಬಂದಿತ್ತು. ಆ ಸ್ಥಾನ ಸಿಕ್ಕಿದರೆ ಉಪಯೋಗ ಮಾಡಿಕೊಳ್ಳಿ.‌ ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಲ್ಲ ಎಂದು ಅವರಿಗೆ ಹೇಳಿದ್ದೆ.‌ ಇಬ್ರಾಹಿಂ ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ.‌ ಅವರು ಪಕ್ಷಕ್ಕೆ ಬಂದರೆ ಸ್ವಾಗತ.‌ ನಾವು ಕದ್ದುಮುಚ್ಚಿ ಯಾವುದನ್ನೂ ಮಾಡಿಲ್ಲ. ಇಂದೂ ಕೂಡ ನಾನು ಕರೆ ಮಾಡಿ ಮಾತಾಡಿದ್ದೇನೆ. ಪಕ್ಷಕ್ಕೆ ಬಂದರೆ ಸೂಕ್ತ ಸ್ಥಾನಮಾನ ಕೊಡುತ್ತೇವೆ ಎಂದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.