Udayavni Special

ಕರವಸ್ತ್ರ ಮತ್ತು ಬಟ್ಟೆಯಿಂದ ರಕ್ಷಣೆ ಪಡೆದರೆ ದಂಡ ವಿಧಿಸಬೇಡಿ! ಆಯುಕ್ತರ ಸೂಚನೆ


Team Udayavani, Nov 6, 2020, 6:45 PM IST

ಕರವಸ್ತ್ರ ಮತ್ತು ಬಟ್ಟೆಯಿಂದ ರಕ್ಷಣೆ ಪಡೆದರೆ ದಂಡ ವಿಧಿಸಬೇಡಿ ಮಾರ್ಷಲ್‌ಗಳಿಗೆ ಆಯುಕ್ತ ಸೂಚನೆ

ಬೆಂಗಳೂರು: ನಗರದಲ್ಲಿ ಸಾರ್ವಜನಿಕರು ಬಟ್ಟೆ ಅಥವಾ ಕರವಸ್ತ್ರದಿಂದ ಮೂಗು ಮತ್ತು ಬಾಯಿಯನ್ನು ಸಂಪೂರ್ಣವಾಗಿ ಮುಚ್ಚಿದ್ದರೂ ಮಾಸ್ಕ್ ಎಂದೇ ಪರಿಗಣಿಸಿ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ತಿಳಿಸಿದರು.
ನಗರದಲ್ಲಿ ಕೊರೊನಾ ಸೋಂಕು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಸಂಬಂಧ ಪುರಭವನದಲ್ಲಿ ಶುಕ್ರವಾರ ಬಿಬಿಎಂಪಿಯ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಹಾಗೂ ಮಾರ್ಷಲ್‌ ಮೇಲ್ವಿಚಾರಕರ ಜಂಟಿ ಸಭೆ ನಡೆಸಲಾಯಿತು.

ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಬಿಎಂಪಿ ಆಯುಕ್ತರು, ಬಡವರು ಹಾಗೂ ಆರ್ಥಿಕವಾಗಿ ಅಶಕ್ತರು 50 ರೂ. ನೀಡಿ ಮಾಸ್ಕ್ ಖರೀದಿ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಬಟ್ಟೆ ಮತ್ತು ಕರವಸ್ತ್ರ ಬಳಸಿದರೂ ಮಾಸ್ಕ್ ಎಂದು ಪರಿಗಣಿಸಿ. ಇಂತಹ ಪ್ರಕರಣಗಳಲ್ಲಿ ದಂಡ ವಿಧಿಸಬೇಡಿ. ವ್ಯಕ್ತಿ ಸೀನಿದರೆ ಅಥವಾ ಕೆಮ್ಮಿದಾಗ ಇನ್ನೊಬ್ಬ ವ್ಯಕ್ತಿಗೆ ಸೋಂಕು ಹಬ್ಬಬಾರದು ಎನ್ನುವ ಕಾರಣಕ್ಕೆ ಮಾಸ್ಕ್ ಧರಿಸುವಂತೆ ಹೇಳಲಾಗುತ್ತಿದೆ. ಇದೇ ಸಮಯದಲ್ಲಿ ಮಾಸ್ಕ್ ಧರಿಸಿದವರಿಗೂ ಇದು ಹಬ್ಬದಂತೆ ತಡೆಯಬಹುದು. ಬಟ್ಟೆಯಿಂದ ರಕ್ಷಣೆ ಪಡೆದರೂ ತಪ್ಪಿಲ್ಲ ಎಂದು ವಿವರಿಸಿದರು.

ಮಾಸ್ಕ್ ದಂಡ ವಿಧಿಸುವುದೊಂದೇ ಮಾರ್ಷಲ್ ಗಳ ಕೆಲಸವಲ್ಲ. ಸಾರ್ವಜನಿಕರಿಗೆ ಮಾಸ್ಕ್ ಧರಿಸದೆ ಇದ್ದರೆ ಏನು ಸಮಸ್ಯೆ ಆಗುತ್ತದೆ. ನಗರದಲ್ಲಿ ಕೊರೊನಾ ಸೋಂಕು ಹೇಗೆ ಹೆಚ್ಚಾಗುತ್ತದೆ ಎನ್ನುವ ಬಗ್ಗೆ ಇದೇ ಸಮಯದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ:ತಾನೀಗ ಸಂಪೂರ್ಣ ಫಿಟ್‌; ಸ್ಪರ್ಧೆಗೂ ತಯಾರಾಗಿದ್ದೇನೆ: ಪಿ.ವಿ. ಸಿಂಧು

ಜನದಟ್ಟಣೆ ಇರುವ ಕಡೆ ಸಕ್ರಿಯವಾಗಿ ಕೆಲಸ ಮಾಡಿ: ನಗರದಲ್ಲಿ ಹೆಚ್ಚು ಜನ ಸೇರುವ ಮಾರುಕಟ್ಟೆ ಹಾಗೂ ಜಂಕ್ಷನ್ ಗಳು ಸೇರಿದಂತೆ ಜನದಟ್ಟಣೆ ಇರುವ ಕಡೆ ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವಂತೆ ಮಾರ್ಷಲ್‌ ಗಳಿಗೆ ಆಯುಕ್ತರು ನಿರ್ದೇಶನ ನೀಡಿದರು. ಜನ ಹೆಚ್ಚಾಗಿರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿದ್ದಾರೆಯೇ ಇಲ್ಲವೇ ಎಂದು ಪರಿಶೀಲನೆ ನಡೆಸಬೇಕು. ಇಂತಹ ಜಾಗದಲ್ಲಿ ಸೋಂಕು ಬೇಗ ಹಬ್ಬುವ ಸಾಧ್ಯತೆ ಇರುವುದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಮಾತನಾಡಿ, ಯಾವುದೇ ಕಾನೂನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ಸಂಘರ್ಷಗಳು ಸೃಷ್ಟಿಯಾಗುತ್ತವೆ. ಮಾರ್ಷಲ್‌ಗಳು ತಾಳ್ಮೆಯಿಂದ ವರ್ತಿಸಬೇಕು. ನಗರದಲ್ಲಿ 120 ಜನ ಪೊಲೀಸ್‌ ಸಿಬ್ಬಂದಿ ಸಹ ಕೊರೊನಾ ಸೋಂಕು ನಿಯಮ ಉಲ್ಲಂಘನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಗತ್ಯತೆ ಬಿದ್ದರೆ ಸಂಚಾರ ಪೊಲೀಸರನ್ನೂ ಸೇವೆಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಗೋಹತ್ಯೆ ನಿಷೇಧ ಕುರಿತು ಇನ್ನಷ್ಟು ಚರ್ಚೆ ಅಗತ್ಯ: ಸಚಿವ ಡಾ.ಕೆ.ಸುಧಾಕರ್

ಮಾರ್ಷಲ್‌ಗಳ ಮೇಲೆ ಹಲ್ಲೆ ಮಾಡಿದರೆ ಜೈಲು: ನಗರದಲ್ಲಿ ಕೊರೊನಾ ಸೋಂಕು ಹಬ್ಬುವುದನ್ನು ತಡೆಯುವ ಉದ್ದೇಶದಿಂದ ಮಾರ್ಷಲ್‌ಗಳು ಶ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮತ್ತು ಅವರ ಮೇಲೆ ಹಲ್ಲೆ ಮಾಡಲು ಯಾರಾದರು ಮುಂದಾದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜೈಲು ಶಿಕ್ಷೆಯೂ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

ಪೊಲೀಸ್‌ ಇಲಾಖೆಯಿಂದ ಮಾರ್ಷಲ್‌ಗಳಿಗೆ ಸಂಪೂರ್ಣ ರಕ್ಷಣೆ ನೀಡಲಾಗುವುದು. ಅಲ್ಲದೆ, ಕೊರೊನಾ ಸೋಂಕು ತಡೆಗೆ ಪೊಲೀಸ್‌ ಇಲಾಖೆಯಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಬಿಬಿ ಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)ರಂದೀಪ್‌, ಜಂಟಿ ಆಯುಕ್ತ ಸರ್ಪ ರಾಜ್‌ ಖಾನ್‌, ಟಾಸ್ಕ್ ಪೋರ್ಸ್‌ ತಂಡದ ಹಿರಿಯ ಐಎಎಸ್‌ ಅಧಿಕಾರಿ ನವೀನ್‌ ರಾಜ್‌ ಸಿಂಗ್‌, ಪೂರ್ವ ವಲಯದ ಜಂಟಿ ಆಯುಕ್ತೆ ಕೆ.ಆರ್‌. ಪಲ್ಲವಿ ಹಾಗೂ ಎಲ್ಲ ವಲಯಗಳ ಮಾರ್ಷಲ್‌ ಮೇಲ್ವಿಚಾರಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

yytyyt

2ನೇ ಮೀರಜ್‌ ಖ್ಯಾತಿ ಬಾಗಲಕೋಟೆಯಲ್ಲಿ ಆಕ್ಸಿಜನ್‌ ಆತಂಕ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಪರೀಕ್ಷೆ ವೇಳೆ ಕೋವಿಡ್ ಲಕ್ಷಣ ಇರುವವರಿಗೆ ಮಾತ್ರೆ ನೀಡುವಂತೆ ಅರೋಗ್ಯ ಇಲಾಖೆ ಸೂಚನೆ

yuyutu6

ತಂದೆ ಕಳೆದುಕೊಂಡ ಮರುದಿನವೇ ವೈದ್ಯ ಸೇವೆಗೆ ಹಾಜರ್‌

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

yytyyt

2ನೇ ಮೀರಜ್‌ ಖ್ಯಾತಿ ಬಾಗಲಕೋಟೆಯಲ್ಲಿ ಆಕ್ಸಿಜನ್‌ ಆತಂಕ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಪರೀಕ್ಷೆ ವೇಳೆ ಕೋವಿಡ್ ಲಕ್ಷಣ ಇರುವವರಿಗೆ ಮಾತ್ರೆ ನೀಡುವಂತೆ ಅರೋಗ್ಯ ಇಲಾಖೆ ಸೂಚನೆ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

ಮನೆಯಲ್ಲೇ ಕ್ವಾರಂಟೈನ್‌ ಆದ ಸೋಂಕಿತರಿಗೆ ವೈದ್ಯಕೀಯ ನೆರವು: ಡಿಸಿಎಂ ಡಾ.ಅಶ್ವತ್ಥನಾರಾಯಣ

MUST WATCH

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

udayavani youtube

ಅಮಾಸೆ ಗಿರಾಕಿ ಎಂದು ತೇಜಸ್ವಿ ಸೂರ್ಯ ವಿರುದ್ಧ ಡಿ ಕೆ ಶಿವಕುಮಾರ್​ ಗರಂ..!

udayavani youtube

ಬಯಲು ಪ್ರದೇಶದಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ

udayavani youtube

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಕಾರ್ ಮೇಲೆ ಹಲ್ಲೆ

ಹೊಸ ಸೇರ್ಪಡೆ

6-22

ಆಮ್ಲಜನಕ ಲಭ್ಯತೆ ಸಮಸ್ಯೆ; ಶಾಸಕ ಹಾಲಪ್ಪ ಆತಂಕ

6-21

ಕೆಲ ಅಸಮಾಧಾನದ ಮಧ್ಯೆಯೂ ಜನಪರ ಕೆಲಸದ ಸಂತೃಪ್ತಿ ಇದೆ : ಹಕ್ರೆ

6-20

ಸೋಂಕು ತಡೆಗೆ ಎಲ್ಲ ವಾರ್ಡ್‌ಗಳಲ್ಲಿ ಸ್ಯಾನಿಟೈಸ್‌

6-16

4 ವರ್ಷವಾದ್ರೂ ಮುಗಿಯದ ಕೆರೆ ನಿರ್ಮಾಣ ಕಾರ್ಯ

yryrtyt

ಬೆಳಗಾವಿ:  ಮಾರುಕಟ್ಟೆ ಸ್ಥಳಾಂತರದಿಂದ ಬಿಗಡಾಯಿಸಿದ ಪರಿಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.