
ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಬಗ್ಗೆ ಆತಂಕ ಬೇಡ: ಸಚಿವ ಪ್ರಹ್ಲಾದ ಜೋಷಿ
ಪ್ರಸಕ್ತ ವರ್ಷ 900 ಮಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ ಗುರಿ
Team Udayavani, Dec 4, 2022, 6:20 AM IST

ಬೆಂಗಳೂರು: ದೇಶದ ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ.
ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಜರಗಿದ ಕಲ್ಲಿದ್ದಲು ಗಣಿ ಹೂಡಿಕೆ ದಾರರ ಸಮಾವೇಶದಲ್ಲಿ ಮಾತನಾ ಡಿದ ಅವರು, ಭಾರತ ಹೆಚ್ಚಿನ ಪ್ರಮಾ ಣದಲ್ಲಿ ಕಲ್ಲಿದ್ದಲನ್ನು ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಜತೆಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ದೇಶವೂ ಆಗಿದೆ. ಹೀಗಾಗಿ ದೇಶದ ಕಲ್ಲಿದ್ದಲಿನ ಭವಿಷ್ಯದ ಬಗ್ಗೆ ಚಿಂತೆ ಆಗತ್ಯವಿಲ್ಲ ಎಂದರು.
ದೇಶದಲ್ಲಿ 2014ರಲ್ಲಿ ಸುಮಾರು 572 ಮಿಲಿಯನ್ ಟನ್ ಕಲ್ಲಿದ್ದಲನ್ನು ಉತ್ಪಾದಿಸಿ ರವಾನೆ ಮಾಡಲಾಗಿದೆ. ಕಳೆದ ವರ್ಷ 817 ಮಿಲಿಯನ್ ಟನ್ ಉತ್ಪಾದನೆ ಮಾಡಲಾಗಿದ್ದು, ಈ ವರ್ಷ 900 ಮಿಲಿಯನ್ ಟನ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಮುಂದಿನ ವರ್ಷ 1000 ಮಿಲಿಯನ್ ಟನ್‌ನಷ್ಟು ಕಲ್ಲಿದ್ದಲು ಉತ್ಪಾದಿಸುವ ಆಲೋಚನೆ ಇದೆ ಎಂದರು.
ಕಲ್ಲಿದ್ದಲು ಕ್ಷೇತ್ರದ ಹೂಡಿಕೆದಾರರಿಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರ ಸರಕಾರ ಕಾನೂನುಗಳನ್ನು ಸರಳಗೊಳಿಸಿದೆ. ಪ್ರಧಾನಿ ಮೋದಿ ಆಡಳಿತ ಅವಧಿಯಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಈಗಾಗಲೇ ಇಡೀ ದೇಶದಲ್ಲಿ 67 ಗಣಿ ಕಂಪೆನಿಗಳಿಗೆ ಹರಾಜು ಮಾಡಲಾಗಿದೆ ಎಂದರು.
ಒಡಿಶಾ ಸರಕಾರ ಕಲ್ಲಿದಲ್ಲು ಕ್ಷೇತ್ರದ ಸುಧಾರಣೆಗೆ ಬಹಳಷ್ಟು ಕಾಳಜಿ ತೋರಿದೆ. ಪ್ರಧಾನಿ ಸಲಹೆ ಮೇರೆಗೆ ಕಲ್ಲಿದ್ದಲು ಕ್ಷೇತ್ರ ನಷ್ಟ ತಗ್ಗಿಸ ಲಾಗಿದೆ. ಒಡಿಶಾ ಸರಕಾರ ಈ ವಿಚಾರದಲ್ಲಿ ಬಹಳ ಬದಲಾವಣೆ ಯನ್ನು ಮಾಡಿಕೊಳ್ಳಲಾಗಿದ್ದು, 2014-15ರಲ್ಲಿ ಒಡಿಶಾ ಸರಕಾರ ಕಲ್ಲಿ ದ್ದಲು ಕ್ಷೇತ್ರದಲ್ಲಿ ಸುಮಾರು 5 ಕೋಟಿ ರೂ. ಆದಾಯ ಸಂಗ್ರಹಿಸಿತ್ತು. ಈಗ ಆ ಪ್ರಮಾಣ 15 ಕೋಟಿ ರೂ.ಗೆ ಏರಿಕೆಯಾಗಿದೆ ಎಂದರು.
ಟಾರ್ಗೆಟ್ ನೀಡಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರು ಕಲ್ಲಿದ್ದಲು ಗಣಿಗಾರಿಕೆ ಬಗ್ಗೆ ಆಸಕ್ತಿ ತೋರಿದ್ದಾರೆ. 500 ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನ ಟಾರ್ಗೆಟ್ ನೀಡಿದ್ದಾರೆ. ನೀವು ದಿಲ್ಲಿಯಲ್ಲಿ ಕುಳಿತುಕೊಳ್ಳದೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರ ದೇಶದ ಆರ್ಥಿ ಕತೆಗೂ ಹೆಚ್ಚಿನ ಕೊಡುಗೆ ನೀಡಬೇಕು ಎಂಬು ವುದು ಪ್ರಧಾನಿ ಅವರ ಆಶಯವಾಗಿದೆ. ಈಗಾ ಗಲೇ ದೇಶದ ಜಿಡಿಪಿಗೆ ಕಲ್ಲಿದ್ದಲು ಕ್ಷೇತ್ರ ಶೇ.0.9 ರಷ್ಟು ಕೊಡುಗೆ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆ ಶೇ 2.5ಕ್ಕೆ ಏರಿಕೆ ಆಗಬೇಕೆಂದು ತಾಕೀತು ಮಾಡಿದ್ದಾರೆ. 2040ರ ವೇಳೆಗೆ ಇಂಧನ ಬೇಡಿಕೆ ಮತ್ತಷ್ಟು ದ್ವಿಗುಣವಾಗುವ ಸಾಧ್ಯತೆಯಿದೆ. ನವೀಕರಣ ಇಂಧನ ಕ್ಷೇತ್ರದಿಂದ ಶೇ.50ರಷ್ಟು ವಿದ್ಯುತ್ ದೊರೆ ಯಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯುತ್‌ಗೆ ಶೇ.25ರಷ್ಟು ಬೇಡಿಕೆಯಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಹಾಲಪ್ಪ ಆಚಾರ್, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಇಲಾಖೆ ಕಾರ್ಯದರ್ಶಿ ಅಮೃತ್‌ಲಾಲ್ ಮೀನಾ ಮತ್ತಿತರರು ಉಪಸ್ಥಿತರಿದ್ದರು.
ಕಬ್ಬಿಣ ಉತ್ಪಾದನೆ ಕರ್ನಾಟಕ ಮುಂಚೂಣಿಯಾಗಲಿದೆ: ಸಿಎಂ
ರಾಜ್ಯದಲ್ಲಿ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಇದ್ದು, ಮುಂದಿನ ನಾಲ್ಕೈದು ವರ್ಷಗಳಲ್ಲಿ ವಿಶ್ವದಲ್ಲೇ ಅತಿ ದೊಡ್ಡ ಕಬ್ಬಿಣದ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಿ ಕರ್ನಾಟಕ ಹೊರ ಹೊಮ್ಮಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.
ಸಮಾವೇಶದಲ್ಲಿ ಮಾತನಾಡಿದ ಅವರು, ಬಂಡವಾಳ ಹೂಡಿಕೆದಾರರ ಅನುಕೂಲ ವಾಗುವಂತೆ ಸರಕಾರ ನೀತಿ ರೂಪಿಸಿದೆ. ಸರಕಾರ ಹೂಡಿಕೆದಾರರ ಹೆಗಲಿಗೆ ಹೆಗಲಾಗಿ ನಿಲ್ಲಲಿದೆ ಎಂಬ ಭರವಸೆ ನೀಡಿದರು.
ಬಳ್ಳಾರಿ ಭಾಗದಲ್ಲಿ ಲಭ್ಯವಿರುವ ಅದಿರಿನ ಬಗ್ಗೆ ಈ ಹಿಂದೆ ಉತ್ತಮ ಅಭಿಪ್ರಾಯ ಇರಲಿಲ್ಲ. ಆದರೆ ತಂತ್ರಜ್ಞಾನದ ಪ್ರಗತಿಯಿಂ ದಾಗಿ ಅಲ್ಲಿನ ಅದಿರಿನ ಮಹತ್ವ ಬೆಳಕಿಗೆ ಬಂದಿದ್ದು ಜಗತ್ತಲ್ಲೇ ಉತ್ಕೃಷ್ಟ ಅದಿರು ರಾಜ್ಯದಲ್ಲಿ ಲಭ್ಯವಾಗಿದೆ. ಹಾಗೆಯೇ ನಿಕ್ಕಲ್, ಕೋಬಾಲ್ಟ್, ಕ್ರೋಮೈಟ್ ಮತ್ತು ಚಿನ್ನದ ಗಣಿಗಾರಿಕೆಯಲ್ಲಿ ರಾಜ್ಯ ಇನ್ನಷ್ಟು ಪ್ರಗತಿ ಸಾಧಿಸಬೇಕಾಗಿದೆ ಎಂದರು.
ಈಗಾಗಲೇ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಂಡವಾಳ ಹೂಡಲು ಹೂಡಿಕೆದಾರರು ಮುಂದೆ ಬಂದಿದ್ದಾರೆ. ಕೋಲಾರದ ಕೆಜಿಎಫ್ನಲ್ಲಿ ಗಣಿಗಾರಿಕೆ ಪುನರ್ ಆರಂಭಿಸಲು ಹೂಡಿಕೆದಾರರು ಮುಂದೆ ಬಂದಿದ್ದು, ಇದರಿಂದ ಪ್ರತ್ಯಕ್ಷವಾಗಿ ಐದು ಸಾವಿರ ಮಂದಿಗೆ ಉದ್ಯೋಗ ಸಿಗಲಿದೆ ಎಂದರು.
ಕಬ್ಬಿಣ ಮತ್ತು ಉಕ್ಕಿನ ಗಣಿಗಾರಿಕೆ ವಿಚಾರ ದಲ್ಲಿ ಸುಪ್ರೀಂಕೋರ್ಟ್ ಮಾರ್ಗ ಸೂಚಿಯಂತೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುತ್ತಿದೆ ಎಂದರು.
2.5ಕೋಟಿ ರೂ.ಬಂಡವಾಳ ಹೂಡಿಕೆ
ನವೀಕರಿಸಬಹುದಾದ ಇಂಧನಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಸೌರ ವಿದ್ಯುತ್, ಪವನ ವಿದ್ಯುತ್ ಈಗ ಸಾಂಪ್ರದಾಯಿಕ ವಿದ್ಯುತ್ ಮೂಲವಾಗಿ ಬದಲಾಗಿದ್ದು ಜಲಜನಕ ಮತ್ತು ಅಮೋನಿಯಾ ಆಧಾರಿತ ವಿದ್ಯುತ್ ಕ್ಷೇತ್ರದಲ್ಲಿ ಮುಂದಿನ ಮುಂದಿನ ಮೂರು ವರ್ಷಗಳಲ್ಲಿ ಎರಡೂವರೆ ಕೋಟಿ ರೂ.ಬಂಡವಾಳ ಹೂಡಿಕೆ ಆಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಸರಕಾರಕ್ಕೆ ನಾಚಿಕೆಗೇಡು; ಸಮವಸ್ತ್ರ ,ಶೂ ನೀಡದಿರುವುದಕ್ಕೆ ಹೈಕೋರ್ಟ್ ತರಾಟೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

38 ವರ್ಷಗಳ ನಂತರ,ನಾನು ಚಿತ್ರದ ಮುಖ್ಯ ಪೋಸ್ಟರ್ನಲ್ಲಿದ್ದೇನೆ: ಅನುಪಮ್ ಖೇರ್ ಸಂಭ್ರಮ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ