ಜ.1ರ ಬಳಿಕ ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಡಯಲ್ ಮಾಡಲು ‘0’ ಒತ್ತಿ
Team Udayavani, Nov 25, 2020, 5:44 PM IST
ನವದೆಹಲಿ: ಮುಂದಿನ ವರ್ಷದ ಜನವರಿಯಿಂದ ನೀವು ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಡಯಲ್ ಮಾಡುವ ಮೊದಲು “0′ ಒತ್ತಬೇಕು. ದೂರಸಂಪರ್ಕ ಸಚಿವಾಲಯ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ.
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನೀಡಿದ ಸಲಹೆ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.
ದೂರಸಂಪರ್ಕ ವ್ಯವಸ್ಥೆ ಒದಗಿಸುವ ಸಂಸ್ಥೆಗಳಿಗೆ ಸೂಕ್ತ ರೀತಿಯಲ್ಲಿ ನಂಬರ್‌ಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ, ಇನ್ನು ಮುಂದೆ ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಡಯಲ್ ಮಾಡುವ ಮುನ್ನ ಸೊನ್ನೆ ಬಟನ್ ಪ್ರಸ್ ಮಾಡಲು ಮರೆತು ಹೋದರೆ, ಅದನ್ನು ನೆನಪಿಸುವ ಧ್ವನಿಮುದ್ರಿಕೆಯೂ ಕೇಳುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ:2021ರ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ‘ಜಲ್ಲಿಕಟ್ಟು’ ಸಿನೆಮಾ ಅಧೀಕೃತ ಪ್ರವೇಶ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444