ವರದಕ್ಷಿಣೆಗಾಗಿ ಪತ್ನಿ ಕೊಲೆ: ಪತಿ-ಮೈದುನನಿಗೆ ಶಿಕ್ಷೆ

Team Udayavani, Feb 7, 2022, 12:24 PM IST

10murder

ಕಲಬುರಗಿ: ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಪತ್ನಿಯನ್ನು ಕೊಲೆ ಮಾಡಿದ ಪತಿ ಮತ್ತು ಆತನ ತಮ್ಮನಿಗೆ ಜೈಲು ಶಿಕ್ಷೆ, ದಂಡ ವಿಧಿಸಿ ಇಲ್ಲಿನ ಒಂದನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ತಾಲೂಕಿನ ಕಗ್ಗನಮಡಿ ಗ್ರಾಮದ ರವಿಕುಮಾರ ಮೂಲಗೆ ಹಾಗೂ ಸಹೋದರ ರೇವಣಸಿದ್ಧಪ್ಪ ಜೈಲು ಶಿಕ್ಷೆಗೆ ಗುರಿಯಾದವರು. 2019ರ ಏಪ್ರಿಲ್‌ 17ರಂದು ಆರೋಪಿ ರವಿಕುಮಾರ ಮೂಲಗೆ ತನ್ನ ಪತ್ನಿ ಅಂಬಿಕಾಳ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದ.

ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ಮದುವೆಯಾಗಿದ್ದರೂ, ತವರು ಮನೆಯಿಂದ ಒಂದು ತೊಲೆ ಬಂಗಾರ, ಟೇಲರಿಂಗ್‌ ಮಶೀನ್‌ ಮತ್ತು 10 ಸಾವಿರ ರೂ. ನಗದು ತರುವಂತೆ ಅಂಬಿಕಾಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಅಂಬಿಕಾಳ ತಂದೆ ನಾಗಣ್ಣ ಅವರು ಅಳಿಯ ರವಿಕುಮಾರ, ಈತನ ತಮ್ಮ ರೇವಣಸಿದ್ಧಪ್ಪ, ಅಕ್ಕ ಶಿವಲೀಲಾ, ಈಕೆಯ ಪತಿ ರಾಜಪ್ಪ ಹಾಗೂ ರಾಜಪ್ಪನ ತಮ್ಮ ಕಲ್ಯಾಣಿ ಎಂಬುವರ ವಿರುದ್ಧ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಿನ ಎಸಿಪಿ ಅಯ್ಯನಗೌಡ ಪಾಟೀಲ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶುಕ್ಲಾಕ್ಷ ಪಾಲನ್‌ ಆರೋಪಿ ರವಿಕುಮಾರ ಮೂಲಗೆ ಹಾಗೂ ಇನ್ನೊಬ್ಬ ಆರೋಪಿ ರೇವಣಸಿದ್ಧಪ್ಪನಿಗೆ ತಲಾ ಐದು ವರ್ಷ ಸಾದಾ ಜೈಲು ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೇ, ಪ್ರಮುಖ ಆರೋಪಿಯಾದ ರವಿಕುಮಾರನಿಗೆ ವರದಕ್ಷಿಣೆ ನಿಷೇಧ ಕಾಯ್ದೆಯಡಿ ಏಳು ವರ್ಷ ಕಠಿಣ ಶಿಕ್ಷೆ, 15 ಸಾವಿರ ರೂ. ದಂಡ ಹಾಗೂ ಕಲಂ 3 ಮತ್ತು 4ರ ಅಡಿ ತಲಾ ಒಂದು ವರ್ಷ ಜೈಲು, 2 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡದ ಹಣದಲ್ಲಿ ನಾಗಣ್ಣನಿಗೆ 25 ಸಾವಿರ ರೂ. ಪರಿಹಾರ ರೂಪದಲ್ಲಿ ನೀಡಲು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಉಳಿದ ಆರೋಪಿತರಾದ ಶಿವಲೀಲಾ, ರಾಜಪ್ಪ, ಕಲ್ಯಾಣಿ ವಿರುದ್ಧ ಆರೋಪ ಸಾಬೀತಾಗಿಲ್ಲ. ಸರ್ಕಾರದ ಪರ ಒಂದನೇ ಅಪರ ಅಭಿಯೋಜಕ ಎಸ್‌.ಆರ್‌. ನರಸಿಂಹಲು ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.