ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

Team Udayavani, Mar 16, 2021, 11:28 PM IST

ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಬೇಸಗೆಯಲ್ಲಿ ಸಾರ್ವಜನಿಕರಿಗೆ ಕುಡಿ ಯುವ ನೀರು ಸಮಸ್ಯೆ ಉಂಟಾ ಗದಂತೆ ಅಧಿಕಾರಿಗಳು ಈಗಿನಿಂದಲೇ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳನ್ನು ಗುರುತಿಸಿ, ಈ ಬಾರಿ ಆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಾರದಂತೆ ಅಗತ್ಯ ಕ್ರಮ ಕೈಗೊಳ್ಳಿ. ಎಲ್ಲ ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಗಳಲ್ಲಿ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸುವಂತೆ ತಿಳಿಸಿದರು.

ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಕುರಿತಂತೆ ಸಂಬಂಧಪಟ್ಟ ಗ್ರಾಮ ಪಂಚಾಯತ್‌ನ ಪಿಡಿಒ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಂಜಿನಿಯರ್‌ಗಳ ಅಭಿಪ್ರಾಯ ಪಡೆದು ಟೆಂಡರ್‌ ಪ್ರಕ್ರಿಯೆಗಳನ್ನು ಸಿದ್ಧ ಮಾಡಿಟ್ಟುಕೊಂಡು, ಸಮಸ್ಯೆ ತಲೆದೋರಿದ ಕೂಡಲೇ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ನಕ್ಷೆ ತಯಾರಿಸಬೇಕು. ಜಿಲ್ಲಾ ವಿಪತ್ತು ನಿರ್ವಹಣ ಯೋಜನೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಗ್ರಾ.ಪಂ. ವಿಪತ್ತು ನಿರ್ವಹಣ ಯೋಜನೆಯಲ್ಲಿ ಅಗತ್ಯವಿರುವ ಗ್ರಾ.ಪಂ.ಗಳಿಗೆ ಸುರಕ್ಷಾ ಉಪಕರಣಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ರವಿ ಓಜನಹಳ್ಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸೂಕ್ತ ಕ್ರಮ ಕೈಗೊಳ್ಳಿ
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ಕ್ರಮ ಗಳನ್ನು ಕೈಗೊಳ್ಳಬೇಕು. ಸಾಧ್ಯವಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ತಹಶೀಲ್ದಾರ್‌ಗಳಿಗೆ ಡಿಸಿ ಸೂಚಿಸಿದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.