ಬೆಳ್ಳಂಬೆಳಗ್ಗೆ ಮರಕ್ಕೆ ಡಿಕ್ಕಿ ಹೊಡೆದ ಬಸ್ : ಚಾಲಕ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Nov 30, 2020, 11:20 AM IST
ಕೊಚ್ಚಿ : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಚ್ಚಿ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ.
ತಿರುವನಂತಪುರಂ ನಿಂದ ಕೋಝಿಕೋಡ್ ಗೆ ತೆರಳುತ್ತಿದ್ದ ಸೂಪರ್ ಡೀಲಕ್ಸ್ ಬಸ್ಸು ಸೋಮವಾರ ಮುಂಜಾನೆ ಕೊಚ್ಚಿ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಚಾಲಕ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅದರಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಇಬ್ಬರು ಪ್ರಯಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಎಚ್ಚರ!…ಸಾರ್ವಜನಿಕ ಸೆಂಟರ್‌ನಲ್ಲಿ ಮೊಬೈಲ್ ಚಾರ್ಜ್ ಮಾಡುವುದು ಎಷ್ಟು ಸುರಕ್ಷಿತ?
ಬಸ್ಸು ಇನ್ನು 2 ಕಿಲೋಮೀಟರ್ ಸಂಚರಿಸಿದರೆ ವೈಟಿಲ್ಲಾ ಬಸ್ಸು ನಿಲ್ದಾಣ ಬರುತಿತ್ತು ಅಲ್ಲಿ 5ರಿಂದ 10ನಿಮಿಷಗಳ ಕಾಲ ವಿಶ್ರಾಂತಿಗೆ ನಿಲ್ಲಿಸುತ್ತಿದ್ದರು ಅದಕ್ಕೆ ಮೊದಲೇ ಅಪಘಾತ ಸಂಭವಿಸಿದೆ ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯಿಂದ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್
ದೆಹಲಿ: ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; 200 ಮಂದಿ ದೆಹಲಿ ಪೊಲೀಸರ ವಶಕ್ಕೆ
ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’