
ಇಡಿ ದಾಳಿ: ಪಂಜಾಬ್ ಸಿಎಂ ಚೆನ್ನಿ ಸಂಬಂಧಿಯಿಂದ 10 ಕೋಟಿ ರೂ ನಗದು ವಶ
Team Udayavani, Jan 19, 2022, 4:56 PM IST

ಚಂಡೀಗಢ: ಚುನಾವಣಾ ಕಾವು ಏರಿರುವ ರಾಜ್ಯ ಪಂಜಾಬ್ ನಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ನಡೆಸಿದ ದಾಳಿಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸಂಬಂಧಿಯೊಬ್ಬರಿಗೆ ಸೇರಿದ
ನಿವೇಶನಗಳಿಂದ 8 ಕೋಟಿ ರೂಪಾಯಿ ಸೇರಿದಂತೆ ಸುಮಾರು 10 ಕೋಟಿ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ರಾಜ್ಯದ ಹನ್ನೆರಡು ಸ್ಥಳಗಳಲ್ಲಿ ನಡೆಸಲಾದ ದಾಳಿಗಳು ಇಂದು ಮುಂಜಾನೆ ಪೂರ್ಣಗೊಂಡಿದ್ದು, ಸಂಸ್ಥೆಯು ಹಲವಾರು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ.
ಕಾರ್ಯಾಚರಣೆಯ ವೇಳೆ ಸುಮಾರು 10 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಅಲಿಯಾಸ್ ಹನಿಗೆ ಸಂಬಂಧಿಸಿದ ನಿವೇಶನಗಳಿಂದ ಸುಮಾರು 8 ಕೋಟಿ ರೂಪಾಯಿ ಹಣ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಸಂದೀಪ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಗೆ ಸಂಬಂಧಿಸಿದ ನಿವೇಶನದಿಂದ ಸುಮಾರು 2 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
ಕಳೆದ 24 ಗಂಟೆಗಳಲ್ಲಿ ದಾಳಿಗೆ ಒಳಗಾದವರ ಪ್ರಾಥಮಿಕ ವಿಚಾರಣೆ ನಡೆಸಲಾಗಿದೆ ಎಂದು ಅವರು ಹೇಳಿದರು.ಒಟ್ಟಾರೆಯಾಗಿ, ಚಂಡೀಗಢ, ಮೊಹಾಲಿ, ಲುಧಿಯಾನ ಮತ್ತು ಪಠಾಣ್‌ಕೋಟ್ ಸೇರಿದಂತೆ ರಾಜ್ಯದ12 ಕ್ಕೂ ಫೆಡರಲ್ ಏಜೆನ್ಸಿಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ.
ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಚನ್ನಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ”ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿಕರ ಮೇಲೆ ಆ ರಾಜ್ಯದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ದಾಳಿ ನಡೆಸಲಾಯಿತು ಮತ್ತು ಪಂಜಾಬ್‌ನಲ್ಲಿ ಇಡಿ ಅದೇ ಮಾದರಿಯನ್ನುಅನುಸರಿಸುತ್ತಿದೆ, ಒತ್ತಡ ಹೇರುತ್ತಿದೆ. ಇದು ರಾಜಕೀಯ ಪಿತೂರಿ” ಎಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್

ಕೆಂಪಣ್ಣ ಹೊಸ ಕಮಿಷನ್ ಬಾಂಬ್ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ