Election:ನಮ್ಮ ಹಕ್ಕೊತ್ತಾಯ-ಹುಣ್ಸೆಮಕ್ಕಿಯಲ್ಲಿ ಸ್ಥಾಪನೆಯಾಗಬೇಕಿದೆ ವಿದ್ಯುತ್‌ ಉಪಕೇಂದ್ರ


Team Udayavani, Apr 10, 2023, 8:02 AM IST

Hunsemakki

ಇಲ್ಲಿ ಗ್ರಾಹಕರೂ ಇದ್ದಾರೆ, ಕೃಷಿಕರೂ ಇದ್ದಾರೆ. ವಿದ್ಯುತ್‌ಗೆ ಬೇಡಿಕೆ ಕೂಡ ಇದೆ. ಆದರೆ ವ್ಯವಸ್ಥೆ ಮಾಡಬೇಕಾದವರು ಮಾತ್ರ ಏನೂ ಗೊತ್ತಿಲ್ಲದಂತೆ ಕುಳಿತಿರುವುದರಿಂದ ಸಮರ್ಪಕ ವಿದ್ಯುತ್‌ ಪೂರೈಕೆಯ ಬೇಡಿಕೆ ಮಾತ್ರ ಇನ್ನೂ ಈಡೇರಿಲ್ಲ.

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಮೊಳಹಳ್ಳಿ, ಹಾರ್ದಳ್ಳಿ, ಮಂಡಳ್ಳಿ, ಯಡಾಡಿ, ಮತ್ಯಾಡಿ, ಹೊಂಬಾಡಿ, ಮಂಡಾಡಿ, ಜಪ್ತಿ , ಕೊರ್ಗಿ, ಕೆದೂರು , ಬೇಳೂರು ಕಾಳಾವರ, ಅಸೋಡು ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದಲೂ ವಿದ್ಯುತ್‌ ಸಮಸ್ಯೆ ಕಾಡುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್‌ ಉಪಕೇಂದ್ರ ಸ್ಥಾಪನೆಯಾಗಬೇಕು ಎನ್ನುವ ಈ ಭಾಗದ ಜನರ ಕನಸು ಇನ್ನೂ ನನಸಾಗದೆ ಹಾಗೆಯೇ ಉಳಿದಿದೆ.

ಗ್ರಾಮೀಣ ಭಾಗವಾಗಿರುವ ಈ ವ್ಯಾಪ್ತಿಯಲ್ಲಿ ಬಹುತೇಕ ಮಂದಿ ಕೃಷಿ ಅವ ಲಂಬಿತರಾಗಿದ್ದು, ಕುಂದಾಪುರ ಕ.ವಿ.ಪ್ರ.ನಿ 110 ಕೆ.ವಿ. ವಿದ್ಯುತ್‌ ಉಪಕೇಂದ್ರದಿಂದ ಸರಬರಾಜಾಗುತ್ತಿದೆ. ಸಹಜವಾಗಿ 110 ಕೆ.ವಿ. ವಿದ್ಯುತ್‌ ಮಾರ್ಗಗಳ ಅಂತರಗಳು ಹೆಚ್ಚಾಗಿರುವ ಪರಿಣಾಮ ನಿರಂತರವಾಗಿ ಲೋ ವೋಲ್ಟೆಜ್‌ ಸಮಸ್ಯೆ ಕಾಡುತ್ತಿದೆ.

ಹಲವು ದಶಕಗಳಿಂದಲೂ ಈ ಭಾಗದಲ್ಲಿ ಪದೇ ಪದೆ ವಿದ್ಯುತ್‌ ವ್ಯತ್ಯಯ ಉಂಟಾಗಿ ತಾಂತ್ರಿಕ ದೋಷ ಪತ್ತೆ ಹಚ್ಚುವಿಕೆ ಹಾಗೂ ಸರಿಪಡಿಸುವಿಕೆ ಕಾರ್ಯ ವಿಳಂಬವಾಗಿ ಅನಗತ್ಯ ವಿದ್ಯುತ್‌ ಕಡಿತಗಳನ್ನು ಎದುರಿ ಸುತ್ತಿದ್ದಾರೆ. ಇದರಿಂದ ಸಹಜವಾಗಿ ಕೃಷಿ ಚಟುವಟಿಕೆ, ಕೈಗಾರಿಕೆ ಸೇರಿದಂತೆ ವಾಣಿಜ್ಯ ಚಟುವಟಿಕೆಗಳಿಗೂ ಬಹಳಷ್ಟು ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ಈ ನಿಟ್ಟಿನಲ್ಲಿ ಹುಣ್ಸೆಮಕ್ಕಿಯಲ್ಲಿ ಮೆಸ್ಕಾಂನ ಹೊಸದಾಗಿ ಶಾಖಾ ಕಚೇರಿ ಹಾಗೂ ಹುಣ್ಸೆಮಕ್ಕಿ ಗ್ರಾಮದ ಸರಹದ್ದಿನಲ್ಲಿ ವಿದ್ಯುತ್‌ ಉಪಕೇಂದ್ರ ಸ್ಥಾಪಿಸಬೇಕು ಎನ್ನುವ ಕೂಗು ನಿರಂತರವಾಗಿ ಕೇಳಿ ಬರುತ್ತಿದೆ. ಹೀಗಾಗಿ ಸಂಬಂಧಪಟ್ಟವರು ಗ್ರಾಮೀಣ ಭಾಗದ ಜನತೆಯ ದಶಕಗಳ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ಕ್ರಮಕೈಗೊಳ್ಳಬೇಕು ಎನ್ನುವುದು ಈ ಭಾಗದ ಗ್ರಾಮಸ್ಥರು ಮತ್ತು ರೈತರ ಒಕ್ಕೊರಲ ಆಗ್ರಹವಾಗಿದೆ.

~ ಟಿ. ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.