ಚುನಾವಣಾ ಸಿದ್ಧತೆ: ಇಂದು ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ
Team Udayavani, Feb 3, 2023, 7:05 AM IST
ಬೆಂಗಳೂರು: ಚುನಾವಣಾ ಸಿದ್ಧತೆ ದೃಷ್ಟಿಯಿಂದ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ಶುಕ್ರವಾರ ನಡೆಯಲಿದ್ದು, ತಂತ್ರಗಾರಿಕೆ ದೃಷ್ಟಿಯಿಂದ ನಡೆಯುವ ರಾಜ್ಯಮಟ್ಟದ ಮೊದಲ ಉನ್ನತ ಹಂತದ ಸಭೆ ಇದಾಗಲಿದೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಭೆ ಪ್ರಾರಂಭವಾಗಲಿದ್ದು, ಐದು ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ. ಚುನಾವಣೆ ಸಿದ್ಧತೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ನಡೆಯುವ ರಥಯಾತ್ರೆಯ ದಿನಾಂಕ, ಪಕ್ಷ ಹಾಗೂ ಸರ್ಕಾರದ ಮಟ್ಟದ ಸಮನ್ವಯತೆ, ಬಜೆಟ್‌ನಲ್ಲಿ ಇರಬೇಕಾದ ಪಕ್ಷದ ಆಶಯಗಳು ಹಾಗೂ ರಾಷ್ಟ್ರೀಯ ನಾಯಕರ ಪ್ರವಾಸದ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ.
ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ ಕುಮಾರಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಕೋರ್ ಕಮಿಟಿಯ ಇತರೆ ಸದಸ್ಯರು ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…
ಕೋವಿಡ್ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ ಪತ್ತೆ
MUST WATCH
ಹೊಸ ಸೇರ್ಪಡೆ
ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ
ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್
ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ