Election Update: ಒಂದೇ ಕಡೆ ಕಣಕ್ಕೆ, ಸಿದ್ದು ಗೆಲುವು ಅನಿವಾರ್ಯ

Team Udayavani, Apr 16, 2023, 7:42 AM IST

siddaramayya

ಬೆಂಗಳೂರು: ಆರಂಭದಿಂದಲೂ ಎರಡು ಕ್ಷೇತ್ರಗಳ ಬಡಬಡಿಕೆಯಲ್ಲಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಉತ್ಸಾಹಕ್ಕೆ ಕಾಂಗ್ರೆಸ್‌ನ ಮೂರನೇ ಪಟ್ಟಿ ತಣ್ಣೀರೆರಚಿದೆ. ಈ ಮೂಲಕ ಅವರ ಸ್ಪರ್ಧೆಯನ್ನು ಒಂದೇ ಕ್ಷೇತ್ರಕ್ಕೆ ಸೀಮಿತಗೊಳಿಸುವಲ್ಲಿ ಅವರದ್ದೇ ಪಕ್ಷದ ನಾಯಕರು ಯಶಸ್ವಿಯಾಗಿದ್ದಾರೆ.

ಕಳೆದ ಬಾರಿ ಬಾದಾಮಿ ಮತ್ತು ಚಾಮುಂಡೇಶ್ವರಿಯಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ, ಈ ಬಾರಿಯೂ ಎರಡು ಕಡೆಯಿಂದ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಆ ಎರಡನೇ ಕ್ಷೇತ್ರ ಕೋಲಾರ ಆಗಿರಲಿದೆ ಎಂದೂ ಚುನಾವಣಾ ಕಾವು ಏರುವ ಮೊದಲೇ ಘೋಷಿಸಿದ್ದರು. ಈ ಮಧ್ಯೆ ಮೊದಲೆರಡು ಪಟ್ಟಿಯಲ್ಲಿ ಕೋಲಾರ ಪ್ರಸ್ತಾಪವೂ ಇರಲಿಲ್ಲ. ಇದರಿಂದ ಎಲ್ಲರ ಚಿತ್ತ “ಚಿನ್ನದ ನಾಡಿ’ನತ್ತ ನೆಟ್ಟಿತ್ತು. ಆದರೆ, ಕೋಲಾರಕ್ಕೆ ಕೊತ್ತೂರು ಮಂಜುನಾಥ ಹೆಸರು ಘೋಷಣೆಯಾಗುವ ಮೂಲಕ ನಿರೀಕ್ಷೆ ಹುಸಿಯಾಗಿದೆ. ಜತೆಗೆ ವರುಣಾದಿಂದ ಗೆಲ್ಲಲೇಬೇಕಾದ ಅನಿವಾರ್ಯತೆಯೂ ಅವರಿಗೆ ಸೃಷ್ಟಿಯಾಗಿದೆ.

2018ರಲ್ಲಿ ಎರಡು ಕಡೆ ಕಣಕ್ಕಿಳಿಯುವಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಒಂದು ಕಡೆ (ತವರು ಜಿಲ್ಲೆ) ಸೋಲನುಭವಿಸಿ, ಮತ್ತೂಂದು ಕಡೆ ಗೆದ್ದಿದ್ದರು. ಈಗ ಅವರು ಪ್ರತಿಪಕ್ಷದ ನಾಯಕರಾಗಿದ್ದು, ಎರಡೆರಡು ಕಡೆ ಸ್ಪರ್ಧಿಸುವುದರೊಂದಿಗೆ ಗೆಲ್ಲಬೇಕಾಗುತ್ತದೆ. ಅಕಸ್ಮಾತ್‌ ಒಂದು ಕಡೆ ಸೋತರೂ ತಪ್ಪು ಸಂದೇಶ ರವಾನೆ ಆಗುತ್ತದೆ. ಹಾಗಾಗಿ, ಒಂದೇ ಕ್ಷೇತ್ರದಿಂದ ಕಣಕ್ಕಿಳಿಯುವುದು ಸೂಕ್ತ ಎಂಬ ಅಭಿಪ್ರಾಯ ಪಕ್ಷದ ಒಳಗೆ ವ್ಯಕ್ತವಾಗಿತ್ತು. ಕೋಲಾರದಲ್ಲಿ ಸ್ಪರ್ಧಿಸಿದರೆ ಗೆಲುವು ಅಷ್ಟೊಂದು ಸುಲಭವಲ್ಲ ಎಂಬುದಕ್ಕೆ ಕೋಲಾರ ಜಿಲ್ಲೆಯಲ್ಲಿರುವ ಕಾಂಗ್ರೆಸ್‌ ಬಣ ರಾಜಕಾರಣವೇ ಪ್ರಮುಖವಾಗಿತ್ತು. ಇದನ್ನೇ ಅಸ್ತ್ರ ಮಾಡಿಕೊಂಡ ಸಿದ್ದರಾಮಯ್ಯ ವಿರೋಧಿ ಬಣ ಕೊನೆಗೂ ಕೋಲಾರ ತಪ್ಪಿಸಿ ವರುಣಾಗೆ ಸೀಮಿತಗೊಳಿಸಿದ್ದಾರೆ.

ಕೋಲಾರ ಗುಟ್ಟನ್ನು ವರಿಷ್ಠರಿಗೆ ಮನದಟ್ಟು ಮಾಡಿ, ಹೈಕಮಾಂಡ್‌ನಿಂದಲೇ ಸಿದ್ದರಾಮಯ್ಯ ಅವರನ್ನು ಮನವೊಲಿಸುವಲ್ಲಿ “ಕೈ’ ನಾಯಕರು ಕೊನೆಗೂ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರು ಕಣಕ್ಕಿಳಿಯಲಿರುವ ಕ್ಷೇತ್ರ ವರುಣಾ ಒಂದೇ ಎನ್ನುವುದು ಖಚಿತವಾಗಿದೆ. ಈಗ ಅವರ ಮುಂದೆ ಎರಡು ಸವಾಲುಗಳಿವೆ- ಒಂದು ಪಕ್ಷದಲ್ಲೇ ತಮ್ಮನ್ನು ಕಟ್ಟಿಹಾಕಲು ಹವಣಿಸುತ್ತಿರುವ ಬಣದ ಬೇಗುದಿಯನ್ನು ಮೆಟ್ಟಿನಿಲ್ಲುವುದು. ಮತ್ತೂಂದು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿರುವ ಎದುರಾಳಿಗಳನ್ನು ಮಣಿಸುವುದು. ಇದರ ಜತೆಗೆ ರಾಜ್ಯಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಗೆಲುವಿನ ದಡ ತಲುಪಿಸುವುದು. ಇದೆಲ್ಲವೂ ಅಷ್ಟು ಸುಲಭದ ತುತ್ತು ಅಲ್ಲ. ಇದಕ್ಕಾಗಿ ಅವರು ಹಲವು ಪಟ್ಟುಗಳು, ಕಸರತ್ತುಗಳನ್ನು ಕೂಡ ನಡೆಸಬೇಕಾಗಿದೆ. ಅಂದಹಾಗೆ, ಬಿಜೆಪಿಯಿಂದ ಸಿದ್ದರಾಮಯ್ಯ ಅವರ ಎದುರಾಳಿ ವಿ. ಸೋಮಣ್ಣ ಆಗಿದ್ದರೆ, ಜೆಡಿಎಸ್‌ನಿಂದ ಭಾರತಿ ಶಂಕರ್‌ ಆಗಿದ್ದಾರೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.