ಚುನಾವಣೆ: ಕೇಂದ್ರ ಚುನಾವಣ ಆಯೋಗ ಪರಿಶೀಲನೆ

Team Udayavani, Jan 4, 2023, 7:30 AM IST

ಚುನಾವಣೆ: ಕೇಂದ್ರ ಚುನಾವಣ ಆಯೋಗ ಪರಿಶೀಲನೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿರುವಂತೆ ಕೇಂದ್ರ ಚುನಾವಣ ಆಯೋಗದ ದೃಷ್ಟಿ ಕರ್ನಾಟಕದತ್ತ ನೆಟ್ಟಿದೆ. ಅದರ ಭಾಗವಾಗಿ ಚುನಾವಣೆಯ ಪೂರ್ವ ಸಿದ್ಧತೆಗಳನ್ನು ಆಯೋಗ ಪರಿಶೀಲಿಸಿದೆ.

ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಕೈಗೊಂಡಿರುವ ಪೂರ್ವ ತಯಾರಿ ಕಾರ್ಯಕ್ರಮ ಗಳನ್ನು ಕೇಂದ್ರ ಚುನಾವಣ ಆಯೋಗದ ಆಯುಕ್ತ ಅಜಯ್‌ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಸೋಮವಾರ ಮತ್ತು ಮಂಗಳವಾರ ಪರಿಶೀಲಿಸಿದರು.

ಚುನಾವಣಾಧಿಕಾರಿಗಳ ಜತೆ ಚರ್ಚೆ
ಚುನಾವಣ ಪೂರ್ವ ಸಿದ್ಧತೆಗಳನ್ನು ಪರಿವೀಕ್ಷಿಸಲು 2 ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಚುನಾವಣ ಆಯೋಗದ ಈ ಇಬ್ಬರು ಹಿರಿಯ ಅಧಿಕಾರಿಗಳು ಮೊದಲ ದಿನ ಜ. 2ರಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎರಡನೇ ದಿನ ಜ. 3ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳ ಜತೆ ವರ್ಚುವಲ್‌ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದರು.

ಅಂತಿಮ ಪಟ್ಟಿ: ನಿಗಾ ವಹಿಸಿ
ಅಂತಿಮ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರ ಮಾಹಿತಿ ಸರಿಯಾಗಿರಬೇಕು. ಹೆಸರುಗಳನ್ನುಕೈ ಬಿಡದಂತೆ ಜಾಗೃತ ವಹಿಸಬೇಕು. ಜಿಲ್ಲಾ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಪ್ರತೀ ಮನೆ-ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯನ್ನು ತಳಹಂತದ ಅಧಿಕಾರಿಗಳು ಸಂಗ್ರಹಿಸಿರುವ ಬಗ್ಗೆ ನಿಗಾ ವಹಿಸಬೇಕು. ಅಂತಿಮ ಮತದಾರರ ಪಟ್ಟಿಯ ತಯಾರಿಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಸೇರ್ಪಡೆಗೊಂಡಿರುವ ಮತ್ತು ತೆಗೆದು ಹಾಕಿರುವ 10 ಮತಕೇಂದ್ರಗಳನ್ನು ಗುರುತಿಸಿ ಅವುಗಳಿಗೆ ಸಕಾರಣಗಳನ್ನು ಕಂಡುಕೊಂಡು ಸರಿಮಾಡುವಂತೆ ಸೂಚಿಸಿದರು.

ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್‌ ಕುಮಾರ್‌, ಪಿ. ರಾಜೇಂದ್ರ ಚೋಳನ್‌ ಇದ್ದರು.

ಮಾರ್ಗಸೂಚಿ ಪಾಲಿಸಿ
ಸಭೆಯಲ್ಲಿ ಮುಖ್ಯವಾಗಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿ ಚರ್ಚಿಲಾಯಿತು. ಅದರಲ್ಲೂ ಮುಖ್ಯವಾಗಿ ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತಪಟ್ಟವರ ಹೆಸರನ್ನು ತೆಗೆದು ಹಾಕು ವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆ ಕುರಿತಂತೆ ಅನುಸರಿಸಬೇಕಾದ ವಿಧಾನಗಳ ಕುರಿತು ಹೆಚ್ಚು ಒತ್ತು ನೀಡುವಂತೆ ಹಾಗೂ ಚುನಾವಣ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸು
ವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಅಳಿವಿನಂಚಿನಲ್ಲಿರುವ ಗೀಜಗನ ಹಕ್ಕಿ ಗೂಡುಗಳು… 

ಅಳಿವಿನಂಚಿನಲ್ಲಿರುವ ಗೀಜಗದ ಹಕ್ಕಿ ಗೂಡುಗಳು… ಗೀಜಗದ ಹೆಣಿಕೆಗೆ ಸರಿಸಾಟಿ ಯಾರಿಲ್ಲ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ