ಶೀಘ್ರದಲ್ಲೇ Ethanol ಚಾಲಿತ ವಾಹನಗಳು ಮಾರುಕಟ್ಟೆಗೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ
Team Udayavani, Jun 27, 2023, 7:40 AM IST
ಮುಂಬೈ: ಸಂಪೂರ್ಣವಾಗಿ ಎಥೆನಾಲ್ನಿಂದಲೇ ಚಲಿಸುವ ವಾಹನಗಳನ್ನು ಪರಿಚಯಿಸಬೇಕೆಂಬ ಕೇಂದ್ರ ಸರ್ಕಾರದ ಆಶಯ ಸದ್ಯದಲ್ಲೇ ಸಾಕಾರಗೊಳ್ಳಲಿದೆ. ಹೀಗೆಂದು ಸ್ವತಃ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೇ ಹೇಳಿದ್ದಾರೆ.
ಸದ್ಯದಲ್ಲೇ ಎಥೆನಾಲ್ನಿಂದಲೇ ಸಂಪೂರ್ಣವಾಗಿ ಸಂಚರಿಸಬಲ್ಲಂಥ ವಾಹನಗಳನ್ನು ಭಾರತದ ಮಾರುಕಟ್ಟೆಗೆ ಬಿಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾವು ಈಗ ಎಥೆನಾಲ್ನಿಂದಲೇ ಚಲಿಸುವ ಹೊಸ ವಾಹನಗಳನ್ನು ಪರಿಚಯಿಸಲಿದ್ದೇವೆ. ಬಜಾಜ್, ಟಿವಿಎಸ್ ಮತ್ತು ಹೀರೋ ಸ್ಕೂಟರ್ಗಳು ಶೇ.100ರಷ್ಟು ಎಥೆನಾಲ್ನಿಂದಲೇ ಸಂಚರಿಸಲಿವೆ. ಆಗಸ್ಟ್ನಲ್ಲಿ ನಾನು ಸಂಪೂರ್ಣವಾಗಿ ಎಥೆನಾಲ್ ಮೂಲಕ ಚಲಿಸುವ ಟೊಯೊಟಾ ಕಂಪನಿಯ ಕ್ಯಾಮ್ರಿ ಕಾರನ್ನು ಬಿಡುಗಡೆ ಮಾಡುತ್ತೇನೆ. ಅದು ಶೇ.40ರಷ್ಟು ವಿದ್ಯುತ್ಛಕ್ತಿಯನ್ನೂ ಉತ್ಪತ್ತಿ ಮಾಡುತ್ತದೆ ಎನ್ನುವುದು ವಿಶೇಷ’ ಎಂದಿದ್ದಾರೆ.
ಎಥೆನಾಲ್ನ ದರ 60ರೂ.ಗಳಾದರೆ, ಲೀ.ಪೆಟ್ರೋಲ್ ದರ 120 ರೂ.ಗಳು. ಅಲ್ಲದೆ, ಎಥೆನಾಲ್ ವಾಹನ ಶೇ.40ರಷ್ಟು ವಿದ್ಯುತ್ಛಕ್ತಿಯನ್ನೂ ಉತ್ಪತ್ತಿ ಮಾಡುತ್ತದೆ ಎಂದೂ ಗಡ್ಕರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?