ಸೆ.17: ಉದಯವಾಣಿ ಕಚೇರಿಗೆ ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹೀರೋ ಅನಂತ್ ನಾಗ್ ಭೇಟಿ

ಅದ್ಭುತ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ, ಫಿಲಂಫೇರ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Team Udayavani, Sep 16, 2021, 4:05 PM IST

ಸೆ.16: ಉದಯವಾಣಿ ಕಚೇರಿಗೆ ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹೀರೋ ಅನಂತ್ ನಾಗ್ ಭೇಟಿ

ಮಣಿಪಾಲ:ಕನ್ನಡ ಚಿತ್ರರಂಗದ ಹಿರಿಯ ನಟ, ಎವರ್ ಗ್ರೀನ್ ಹೀರೋ ಅನಂತ್ ನಾಗ್ ಹಾಗೂ ಪತ್ನಿ ಗಾಯತ್ರಿ ಅನಂತ್ ನಾಗ್ ಅವರು ಶುಕ್ರವಾರ (ಸೆಪ್ಟೆಂಬರ್ 17) ಉದಯವಾಣಿ ದೈನಿಕದ ಪ್ರಧಾನ ಕಚೇರಿಗೆ ಭೇಟಿ ನೀಡಲಿದ್ದಾರೆ. ಅನಂತ್ ನಾಗ್ ದಂಪತಿ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಉದಯವಾಣಿ ಕಚೇರಿಗೆ ಭೇಟಿ ನೀಡಲಿದ್ದಾರೆ. ನಂತರ ಅವರು ಉದಯವಾಣಿ ಡಾಟ್ ಕಾಮ್ ನ ತೆರೆದಿದೆ ಮನೆ ಬಾ ಅಥಿತಿ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಉದಯವಾಣಿ ಡಾಟ್ ಕಾಮ್ ನ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ನಟ ಅನಂತ್ ನಾಗ್ ಅವರು ತಮ್ಮ ಸುದೀರ್ಘ ಸಿನಿ ಪಯಣ, ರಂಗಭೂಮಿ ಸೇರಿದಂತೆ ಇತ್ತೀಚಿಗಿನ ಸಿನಿಮಾಗಳ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲಿದ್ದಾರೆ.

ಅನಂತ್ ನಾಗ್ ಅವರು 1987ರಲ್ಲಿ ನಟಿ ಗಾಯತ್ರಿ ಅವರನ್ನು ವಿವಾಹವಾಗಿದ್ದರು. ಗಾಯತ್ರಿ ಅವರು ಶಂಕರ್ ನಾಗ್ ಅಭಿನಯದ ಆಟೋ ರಾಜ ಸಿನಿಮಾದಲ್ಲಿ ನಟಿಸಿದ್ದರು. ಗಾಯತ್ರಿ ಅವರು 1972ರಲ್ಲಿ ಹಿಂದಿಯಲ್ಲಿ ತೆರೆಕಂಡಿದ್ದ ವಿಕ್ಟೋರಿಯಾ ನಂ.203 ಸಿನಿಮಾದಲ್ಲಿ ಬಾಲನಟಿಯಾಗಿ ನಟಿಸುವ ಮೂಲಕ ಬೆಳ್ಳಿ ತೆರೆಗೆ ಪ್ರವೇಶಿಸಿದ್ದರು. ನಂತರ ಹಲವಾರು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದು, ಬಳಿಕ ಕನ್ನಡ ಚಿತ್ರರಂಗದತ್ತ ಹೊರಳಿದ್ದರು.  ವಸಂತ ಗೀತ, ಸುಖ ಸಂಸಾರಕ್ಕೆ ಹನ್ನೆರಡು ಸೂತ್ರಗಳು, ಜ್ವಾಲಾಮುಖಿ, ಶ್ವೇತ ಗುಲಾಬಿ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದರು.

1973ರಲ್ಲಿ ತೆರೆಕಂಡಿದ್ದ ಕನ್ನಡ ಚಿತ್ರ ಸಂಕಲ್ಪದ ಮೂಲಕ ಅನಂತ್ ನಾಗ್ ಅವರು ಬೆಳ್ಳಿತೆರೆಗೆ ಪ್ರವೇಶಿಸಿದ್ದರು. ಕನ್ನಡದಲ್ಲಿ ಬಂದ ಹೊಸ ಅಲೆಯ ಚಿತ್ರಗಳಲ್ಲಿ ಸಂಕಲ್ಪ ಗಮನಾರ್ಹವಾದ ಚಿತ್ರವಾಗಿದೆ. ನಂತರ ಹಂಸಗೀತೆ, ಕನ್ನೇಶ್ವರ ರಾಮ, ಬರ, ಅವಸ್ಥೆ, ಉದ್ಭವ, ಮಿಂಚಿನ ಓಟ, ಆ್ಯಕ್ಸಿಡೆಂಟ್, ಬೆಳದಿಂಗಳ ಬಾಲೆ, ಮತದಾನ, ಬೆಂಕಿಯ ಬಲೆ, ಚಂದನದ ಗೊಂಬೆ, ನಾ ನಿನ್ನ ಬಿಡಲಾರೆ, ನೋಡಿ ಸ್ವಾಮಿ ನಾವಿರೋದೆ ಹೀಗೆ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಅಷ್ಟೇ ಅಲ್ಲ ಡಾ.ರಾಜ್ ಕುಮಾರ್ ಜತೆ ಕಾಮನಬಿಲ್ಲು, ವಿಷ್ಣುವರ್ಧನ್ ಜತೆಗಿನ ನಿಷ್ಕರ್ಷ, ಮತ್ತೆ ಹಾಡಿತು ಕೋಗಿಲೆ, ಜೀವನದಿ, ರವಿಚಂದ್ರನ್ ಅವರ ರಣಧೀರ, ಶಾಂತಿಕ್ರಾಂತಿ, ಮುಂಗಾರು ಮಳೆ, ಗಾಳಿಪಟ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಭಾರತದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ, ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ಧಾರವಾಹಿಯಲ್ಲಿ ಅನಂತ್ ನಾಗ್ ಅಭಿನಯಿಸಿದ್ದರು.

ಇತ್ತೀಚೆಗಿನ  ಕೆಜಿಎಫ್ ಚಾಪ್ಟರ್ 1, ಕವಲು ದಾರಿ, ಯಾನ, ಆಯುಷ್ಮಾನ್ ಭವ, ಆಡುವ ಗೊಂಬೆ, ತೆಲುಗಿನ ಭೀಷ್ಮ ಚಿತ್ರದಲ್ಲಿಯೂ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಹಿಂದಿಯ ಅಂಕುರ್, ನಿಶಾಂತ್, ಭೂಮಿಕಾ, ಮಂಥನ್, ಕೊಂಡುರಾ, ಕಲಿಯುಗ್, ಮಂಗಲ್ ಸೂತ್ರ, ರಾತ್, ಯುವ ಸಿನಿಮಾದಲ್ಲಿ ಅನಂತ್ ನಾಗ್ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಸ್ ಭಾಷೆಯ ಸಿನಿಮಾಗಳಲ್ಲಿ ಗಮರ್ನಾಹವಾದ ಪಾತ್ರಗಳಲ್ಲಿ ನಟಿಸಿದ್ದಾರೆ. ಅನಂತ್ ನಾಗ್ ಅವರ ಅದ್ಭುತ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ, ಫಿಲಂಫೇರ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

ಹೊಸ ಸೇರ್ಪಡೆ

araga jnanendra

ಮನುಷ್ಯರನ್ನಾಗಿಸುವಲ್ಲಿ ಪ್ರಸ್ತುತ ಶಿಕ್ಷಣ ವಿಫ‌ಲ: ಆರಗ ಜ್ಞಾನೇಂದ್ರ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

by-election-24

ದೇಗಲೂರ ಉಪ ಕದನ; ಚವ್ಹಾಣ ಪ್ರಚಾರ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.