ಮಂಗಳೂರು : ಆಸ್ಪತ್ರೆಯಲ್ಲಿ ಹೆಣ್ಣಿನ ಬದಲು ಗಂಡು ಮಗು; ಪೊಲೀಸರಿಗೆ ದೂರು
Team Udayavani, Oct 15, 2021, 1:30 PM IST
ಮಂಗಳೂರು : ನಗರದ ಲೇಡಿ ಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿನ ಬದಲಾಗಿ ಗಂಡು ಮಗು ನೀಡಿರುವ ಕುರಿತು ಶುಕ್ರವಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟೇಶ್ವರ ನಿವಾಸಿಯಾಗಿರುವ ಮುಸ್ತಫಾ ಎನ್ನುವವರು ದೂರು ನೀಡಿದ್ದು, ಸೆಪ್ಟೆಂಬರ್ 27 ರಂದು ಅವರ ಪತ್ನಿ ಅಮ್ರೀನ್ ಎನ್ನುವವರು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಸಿಬ್ಬಂದಿಗಳು ಹೆಣ್ಣು ಮಗು ಆಗಿರುವ ಬಗ್ಗೆ ನಮಗೆ ದಾಖಲೆಗಳ ಮೂಲಕ ತಿಳಿಸಿದ್ದರು. ಹೆರಿಗೆ ಬಳಿಕ ಮಗುವನ್ನು ರಾತ್ರಿ ಏನ್ ಐಸಿಯು ಗೆ ದಾಖಲಿಸಲಾಗಿತ್ತು. ಅಕ್ಟೋಬರ್ 14ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ತೋರಿಸಲಾಗಿದ್ದು ಈ ವೇಳೆ ಗಂಡು ಮಗುವಾಗಿತ್ತು ಎಂದು ದೂರಿನಲ್ಲಿ ಹೇಳಿಕೊಳ್ಳಲಾಗಿದೆ.
ಇದು ಪ್ರಮಾದ, ಕಣ್ತಪ್ಪಿನಿಂದ ಗಂಡು ಮಗು ಎಂದು ನಮೂದಿಸುವ ಬದಲು ಹೆಣ್ಣು ಮಗು ಎಂದು ವೈದ್ಯರು ಬರೆದಿದ್ದರು, ಅಷ್ಟೇ ಹೊರತು ಮಗು ಬದಲಾಗಿಲ್ಲ. ಈ ಬಗ್ಗೆ ಕ್ಷಮೆ ಯಾಚಿಸುತ್ತೇವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಉರಿಗೌಡ,ನಂಜೇಗೌಡ ಹೆಸರು ರಾಜಕೀಯ ವಿಚಾರ ಆಗಬಾರದು: ಆರ್.ಅಶೋಕ್
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಅಕ್ಷಮ್ಯ ಅಪರಾಧ: ಕೆ.ಎಸ್.ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ
ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ
ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಸುಳ್ಳು ಭರವಸೆ