
ಸಿ.ಟಿ.ರವಿ ‘ಮುಂದಿನ ಮುಖ್ಯಮಂತ್ರಿ’ ಆಗಲೆಂದು ಅಭಿಮಾನಿಗಳ ಪಾದಯಾತ್ರೆ
ಗುರಿ ಮುಟ್ಟುವುದೇ ಸುಬ್ರಹ್ಮಣ್ಯ ಸ್ವಾಮಿಗೆ ಅರ್ಪಿಸಿದ ಬೆಳ್ಳಿಯ ಬಾಣ?
Team Udayavani, Mar 26, 2023, 3:44 PM IST

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಟಿ.ರವಿ ಅವರು ಮುಂದಿನ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಭಾನುವಾರ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದಾರೆ.
300ಕ್ಕೂ ಅಧಿಕ ಅಭಿಮಾನಿಗಳು ಚಿಕ್ಕಮಗಳೂರು ನಗರದಿಂದ ಮಲ್ಲೇನಹಳ್ಳಿ ಸಮೀಪವಿರುವ ಇತಿಹಾಸ ಪ್ರಸಿದ್ಧ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ನಡೆಸಿದರು. ಪಾದಯಾತ್ರೆ ವೇಳೆ ಸಿ.ಟಿ.ರವಿ ಮುಂದಿನ ಸಿಎಂ ಎಂದು ಘೋಷಣೆ ಮೊಳಗಿಸಿದ್ದಾರೆ.
ಸುಬ್ರಹ್ಮಣ್ಯ ಸ್ವಾಮಿಗೆ ಬೆಳ್ಳಿಯ ಬಾಣ ನೀಡಿ ಸಿ.ಟಿ.ರವಿ ಅವರು ಭರ್ಜರಿ ಗೆಲುವು ಸಾಧಿಸಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಬೇಡಿಕೊಂಡಿದ್ದಾರೆ.
ಸಿ.ಟಿ.ರವಿ ಅವರ ಮನೆಗೆ ಬಂದು ಅಭಿಮಾನಿಗಳು ಬೆಳ್ಳಿಯ ಬಾಣ ತೆಗೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.
ಅವರು 2004 ರಿಂದ ನಿರಂತರವಾಗಿ ನಾಲ್ಕು ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸೇತುವೆ ಬಳಿ ಎರಡು ಗೋವುಗಳ ತಲೆ, ಕಾಲು ಪತ್ತೆ

ಸ್ಪೀಕರ್ ವಿರುದ್ಧ ವ್ಯಂಗ್ಯ: ಚಿಕ್ಕಮಗಳೂರು ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

ನಾನು ಜಾತ್ಯಾತೀತ ಶಾಸಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ: H.D. ತಮ್ಮಯ್ಯ

Kottigehara: ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಯುವಕನಿಗೆ ಹಲ್ಲೆ

Chikmagalur: ಆಲಿಕಲ್ಲು, ಗುಡುಗು ಸಹಿತ ಧಾರಕಾರ ಮಳೆ; ಹಲವು ಮನೆಗಳಿಗೆ ಹಾನಿ