ದೆಹಲಿಯ ರೈತರ ಹೋರಾಟ ಬೆಂಬಲಿಸಿ ಹಾವೇರಿಯಲ್ಲಿ ಪ್ರತಿಭಟನೆ: ಪೊಲೀಸರಿಂದ ರೈತ ಮುಖಂಡರ ಬಂಧನ
Team Udayavani, Dec 2, 2020, 1:56 PM IST
ಹಾವೇರಿ: ದೆಹಲಿಯಲ್ಲಿನ ರೈತರ ಹೋರಾಟ ಬೆಂಬಲಿಸಿ ಹಾವೇರಿಯ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಬುಧವಾರ ಪ್ರತಿಭಟನೆಗೆ ಮುಂದಾಗಿದ್ದ ರೈತ ಸಂಘಟನೆಯ ನೂರಾರು ಮುಖಂಡರನ್ನು ಪೊಲೀಸ್‌ರು ಬಂಧಿಸಿದ್ದಾರೆ.
ನಗರದ ಹೊರವಲಯದಲ್ಲಿರುವ ಪುಣೆ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿ ರೈತರು ಪ್ರತಿಭಟನೆಗೆ ಮುಂದಾಗಿದ್ದರು. ಹೆದ್ದಾರಿ ತಡೆಯದಂತೆ ಪೊಲೀಸ್‌ರು ಮನವಿ ಮಾಡಿದರೂ ಕೇಳದೇ ರೈತರು ಪ್ರತಿಭಟನೆಗೆ ಮುಂದಾದರು. ಇದರಿಂದ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪೊಲೀಸ್‌ರು ರೈತರನ್ನು ಬಂಧಿಸಿ ಪೊಲೀಸ್ ಠಾಣೆಗೆ ಒಯ್ದರು.
ಇದನ್ನೂ ಓದಿ:ಸರಕಾರ ನಿಮ್ಮ ಜೊತೆಯಿದೆ: ಮೀನುಗಾರರ ಕುಟುಂಬಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಯ
ದೆಹಲಿಯಲ್ಲಿ ಕಳೆದೊಂದು ವಾರದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಕೆಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಅಲ್ಲದೇ ರೈತರ ಮೇಲೆ ಜಲಫಿರಂಗಿ ದಾಳಿ, ಬ್ಯಾರಿಕೇಡ್ ಹಾಕಿ ದೆಹಲಿಯೊಳಗೆ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ರೈತ ವಿರೋಧಿ ನೀತಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
ದೇವೇಗೌಡರ ಮೂರ್ತಿ ಪ್ರತಿಷ್ಠಾಪಿಸಿ ವಚನ ಪಾಲಿಸಿದ್ದ ಸಿಂದಗಿಯ ಮನಗೂಳಿ ಮುತ್ಯಾ!
ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
ಸರಳವಾಗಿ ಸೆಟ್ಟೇರಿದ ಬೆಲ್ಬಾಟಂ-2: ರಿಷಭ್ ಗೆ ಹರಿಪ್ರಿಯಾ, ತಾನ್ಯ ಹೋಪ್ ಸಾಥ್
ಆರೋಗ್ಯ ಕ್ಷೇತ್ರಕ್ಕೆ ಈ ಬಾರಿ ದುಪ್ಪಟ್ಟು ಅನುದಾನ ಸಾಧ್ಯತೆ