ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿ : ಬಂಟ್ವಾಳ ಪುರಸಭೆಯಿಂದ ಮಾರಾಟಕ್ಕೆ ಸಿದ್ಧತೆ

Team Udayavani, Feb 28, 2021, 5:10 AM IST

ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿ : ಬಂಟ್ವಾಳ ಪುರಸಭೆಯಿಂದ ಮಾರಾಟಕ್ಕೆ ಸಿದ್ಧತೆ

ಬಂಟ್ವಾಳ: ಕಸದಿಂದ ರಸ ಎಂಬಂತೆ ಬಂಟ್ವಾಳ ಪುರಸಭೆಯು ತ್ಯಾಜ್ಯದಿಂದ ಗೊಬ್ಬರವನ್ನು ತಯಾರಿ ಸುತ್ತಿದ್ದು, ಇದೀಗ ಸಿದ್ಧಗೊಂಡ ಗೊಬ್ಬರಕ್ಕೆ ದರ ನಿಗದಿ ಮಾಡಿಕೊಂಡು ಮಾರಾಟಕ್ಕೆ ಮುಂದಾಗಿದೆ. ಜತೆಗೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಗೊಬ್ಬರ ತಯಾರಿಸುವುದಕ್ಕೆ ಯೋಜನೆಯನ್ನೂ ರೂಪಿಸಿದೆ.

ಪುರಸಭಾ ವ್ಯಾಪ್ತಿಯಲ್ಲಿ ಸಂಗ್ರಹಗೊಂಡ ಕಸವನ್ನು ತ್ಯಾಜ್ಯ ಸಂಸ್ಕಾರಣ ಘಟಕದಲ್ಲಿ ಹಸಿ ಹಾಗೂ ಒಣ ಕಸವನ್ನಾಗಿ ಮಾರ್ಪಾಟು ಮಾಡಲಾಗುತ್ತದೆ. ಬಳಿಕ ಹಸಿ ಕಸದಿಂದ ಗೊಬ್ಬರ ತಯಾರಿಸುವ ಕಾರ್ಯ ಮಾಡುತ್ತಿದೆ. ಪ್ರಾರಂಭದಲ್ಲಿ ಪುರಸಭಾ ಕಚೇರಿಯ ಹಿಂಭಾಗದಲ್ಲಿ ಈ ಕಾರ್ಯ ನಡೆಯುತ್ತಿದ್ದು, ಪ್ರಸ್ತುತ ಸಂಸ್ಕರಣ ಘಟಕದಲ್ಲಿ ಗೊಬ್ಬರ ತಯಾರಿಕೆ ನಡೆಯುತ್ತಿದೆ.

7ರಿಂದ 8 ಟನ್‌ ಕಸ ಸಂಗ್ರಹ
ಪುರಸಭಾ ವ್ಯಾಪ್ತಿಯಲ್ಲಿ ಸದ್ಯಕ್ಕೆ ಪ್ರತಿದಿನ 7ರಿಂದ 8 ಟನ್‌ ಕಸ ಸಂಗ್ರಹ ವಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳ‌ಲ್ಲೂ ಕಸ ಸಂಗ್ರಹ ಆರಂಭಗೊಂಡಲ್ಲಿ ತ್ಯಾಜ್ಯದ ಪ್ರಮಾಣ ಹೆಚ್ಚಲಿದೆ. ಹಲವು ಸಮಯಗಳಿಂದ ಪ್ರಾಯೋಗಿಕ ನೆಲೆಯಲ್ಲಿ ಗೊಬ್ಬರ ತಯಾರಿ ಮಾಡಲಾಗುತ್ತಿತ್ತು. ಹಲವು ತಿಂಗಳ ಹಿಂದೆ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಮಾರ್ಗದರ್ಶನದಲ್ಲಿ ಕಚೇರಿಯ ಹಿಂಭಾಗದಲ್ಲಿ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲಾಗುತ್ತಿತ್ತು.

ಇದೀಗ ಘಟಕದಲ್ಲಿ ಸುಮಾರು 15 ಟನ್‌ ಗೊಬ್ಬರ ಸಂಗ್ರಹವಿದ್ದು, ಅದರ ಮಾರಾಟಕ್ಕೆ ಸಿದ್ಧತೆ ನಡೆಸಿದೆ. ಗೊಬ್ಬರದ ಮೌಲ್ಯ ನಿಗದಿ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುರಸಭಾ ಆಡಳಿತ ಮಂಡಳಿ ಚರ್ಚೆ ನಡೆಸಿ ಪ್ರತಿ ಕೆಜಿ ಗೊಬ್ಬರಕ್ಕೆ 5 ರೂ.ಗಳಂತೆ ದರ ನಿಗದಿ ಮಾಡಿದೆ. ಗೊಬ್ಬರವನ್ನು ಬ್ಯಾಗ್‌ಗಳಾಗಿ ಮಾರಾಟ ಮಾಡಬೇಕೇ ಅಥವಾ ಒಟ್ಟು ರಾಶಿಯನ್ನೇ ಗೊಬ್ಬರ ವರ್ತಕರಿಗೆ ನೀಡಬೇಕೇ ಎನ್ನುವುದರ ಕುರಿತು ಇನ್ನಷ್ಟೇ ತೀರ್ಮಾನ ಕೈಗೊಳ್ಳಬೇಕಿದೆ.

45 ದಿನಗಳಲ್ಲಿ ಗೊಬ್ಬರ
ಪುರಸಭಾ ವ್ಯಾಪ್ತಿಯಲ್ಲಿ ಸಂಗ್ರಹ ಗೊಂಡ ಹಸಿ ಕಸವು ಗೊಬ್ಬರವಾಗಿ ಪರಿವರ್ತನೆಗೊಳ್ಳಬೇಕಾದರೆ ಸುಮಾರು 45 ದಿನಗಳು ಬೇಕಾಗುತ್ತವೆ. ಪ್ರಾರಂಭದಲ್ಲಿ ವಿಂಗಡಣೆಗೊಂಡ ಹಸಿ ಕಸಕ್ಕೆ ಬಯೋ ಕೆಮಿಕಲ್‌ಗ‌ಳನ್ನು ಹಾಕಿ ಅದನ್ನು ಸಂಬಂ ಧಪಟ್ಟ ಶೆಡ್‌ನ‌ಲ್ಲಿಡಲಾಗುತ್ತದೆ. 45 ದಿನಗಳ ಬಳಿಕ ಅದು ಗೊಬ್ಬರವಾಗಿ ಪರಿವರ್ತ ನೆಗೊಳ್ಳಲಿದ್ದು, ಯಂತ್ರದ ಮೂಲಕ ಪುಡಿ ಮಾಡಿ ಮಾರಾಟಕ್ಕೆ ಸಿದ್ಧಪಡಿಸಲಾಗುತ್ತದೆ.

65 ಲಕ್ಷ ರೂ.ಯೋಜನೆ
ಪ್ರಸ್ತುತ ಪುರಸಭೆಯ ಘಟಕದಲ್ಲಿ ಹಸಿ ಕಸವು ಗೊಬ್ಬರವಾಗಿ ಪರಿವರ್ತನೆಗೊಳ್ಳುತ್ತಿದೆಯಾದರೂ ಅದಕ್ಕೆ ಸಂಬಂಧಿಸಿದ ಸೂಕ್ತ ವ್ಯವಸ್ಥೆಗಳಿಲ್ಲ. ಹೀಗಾಗಿ ಅವುಗಳಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 65 ಲಕ್ಷ ರೂ.ಅನುದಾನ ಮೀಸಲಿಟ್ಟು ಯೋಜನೆ ಹಾಕಿಕೊಳ್ಳಲಾಗಿದೆ. ಮುಖ್ಯವಾಗಿ ಸಿದ್ಧಗೊಂಡ ಗೊಬ್ಬರವನ್ನು ಪುಡಿ ಮಾಡುವುದಕ್ಕೆ ಶ್ರೆಡ್ಡಿಂಗ್‌ ಮೆಷಿನ್‌ ಅಗತ್ಯವಾಗಿದೆ. ಇದಕ್ಕಾಗಿ ಸುಮಾರು 10 ಲಕ್ಷ ರೂ. ಹಾಗೂ 3 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ. ಜತೆಗೆ ಶೆಡ್‌ವೊಂದನ್ನು ನಿರ್ಮಿಸುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಜತೆಗೆ ಇನ್ನಿತರ ವ್ಯವಸ್ಥೆಯನ್ನು ಕೈಗೊಳ್ಳುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದ್ದು, ಅದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಲ್ಲಿ ಗೊಬ್ಬರದ ರೂಪದಲ್ಲಿ ಪುರಸಭೆಗೆ ಒಂದಷ್ಟು ಆದಾಯ ಸಿಗಲಿದೆ.

5 ರೂ.ನಂತೆ ಮಾರಾಟ
ಈಗಾಗಲೇ ಸುಮಾರು 15 ಟನ್‌ ಗೊಬ್ಬರ ನಮ್ಮಲ್ಲಿ ಸಂಗ್ರಹವಿದ್ದು, ಕೆಜಿಗೆ 5 ರೂ.ಗಳಂತೆ ಮಾರಾಟ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಿತ್ಯ 7ರಿಂದ 8 ಟನ್‌ ಕಸ ಸಂಗ್ರಹವಾಗುತ್ತಿದ್ದು, ಹಸಿ ಕಸದ ಪ್ರಮಾಣದಷ್ಟೇ ಗೊಬ್ಬರ ಸಂಗ್ರಹವಾಗಲಿದೆ. ಗೊಬ್ಬರ ತಯಾರಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು 65 ಲಕ್ಷ ರೂ.ಗಳ ಯೋಜನೆ ಹಾಕಿಕೊಳ್ಳಲಾಗಿದೆ.
– ಜಯಶಂಕರ್‌ ಪ್ರಸಾದ್‌, ಆರೋಗ್ಯ ನಿರೀಕ್ಷಕರು, ಬಂಟ್ವಾಳ ಪುರಸಭೆ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.