Fire: ಬಾಂಗ್ಲಾದ ಬೃಹತ್ ಮಾರುಕಟ್ಟೆ ಕೇಂದ್ರಕ್ಕೆ ಬೆಂಕಿ
Team Udayavani, Apr 16, 2023, 7:16 AM IST
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಪ್ರಖ್ಯಾತ ನ್ಯೂ ಸೂಪರ್ ಮಾರ್ಕೆಟ್ ಬೃಹತ್ ಸಂಕೀರ್ಣದಲ್ಲಿ ಶನಿವಾರ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಳಿಗೆಗಳು ಹೊತ್ತಿ ಉರಿದಿವೆ. ಬೆಂಕಿ ನಂದಿಸಲು ದೇಶದ ಮಿಲಿಟರಿ ವ್ಯವಸ್ಥೆ ಹರಸಾಹಸ ಪಡುವಂತಾಗಿದೆ. ಢಾಕಾ ಕಾಲೇಜು ಸಮೀಪದಲ್ಲಿರುವ ನ್ಯೂ ಸೂಪರ್ ಮಾರ್ಕೆಟ್ ಸಂಕೀರ್ಣದ 2ನೇ ಹಂತಸ್ತಿನಲ್ಲಿ ಶನಿವಾರ ಮುಂಜಾನೆ 5.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಸಂಪೂರ್ಣ ಸಂಕೀರ್ಣಕ್ಕೆ ಬೆಂಕಿ ಆವರಿಸಿದ್ದು, ಸಾವಿರಾರು ಮಳಿಗೆಗಳು ಬೆಂಕಿಗೆ ಆಹುತಿಯಾಗಿವೆ.
ದೇಶದ ವಾಯುಪಡೆ, ಭೂಪಡೆ ಹಾಗೂ ನೌಕಾಪಡೆಗಳು ಕೂಡ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದು, ಫೈರ್ ಸರ್ವೀಸ್ನ 28 ಘಟಕಗಳನ್ನೂ ನಿಯೋಜಿಸಲಾಗಿದೆ. ಕಳೆದ ತಿಂಗಳಷ್ಟೇ ರಾಜಧಾನಿಯ ಇಂಥದ್ದೇ ಮತ್ತೂಂದು ಮಾರುಕಟ್ಟೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 23 ಮಂದಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ