ಬೆಂಗಳೂರಿನಲ್ಲಿ ಅಗ್ನಿ ಅವಘಡ : 2 ಫ್ಲ್ಯಾಟ್ ಗಳಿಗೆ ಹೊತ್ತಿಕೊಂಡ ಬೆಂಕಿ
Team Udayavani, Nov 17, 2021, 4:58 PM IST
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಬುಧವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, 2 ಫ್ಲಾಟ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ.
ವಸುಂಧರಾ ಲೇಔಟ್ನ ವಿ ಮ್ಯಾಕ್ಸ್ ಚಾಲೇಟ್ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡವಾಗಿದ್ದು, ಬೆಂಕಿ ಎರಡು ಫ್ಲ್ಯಾಟ್ಗಳಿಗೆ ವ್ಯಾಪಿಸಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದು, ಇದುವರೆಗೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಇತ್ತೀಚೆಗೆ ನಗರದ ಅಪಾರ್ಟ್ಮೆಂಟ್ವೊಂದರ ಬಾಲ್ಕನಿಯಲ್ಲಿ ಮಹಿಳೆಯೊಬ್ಬರು ಬೆಂಕಿಯಲ್ಲಿ ಸಜೀವವಾಗಿ ಉರಿದುಹೋದ ಘಟನೆ ನಡೆದಿತ್ತು. ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ವೈರಲ್ ಆದ ಭಯಾನಕ ದೃಶ್ಯಾವಳಿಗಳು ಬೆಚ್ಚಿ ಬೀಳಿಸುವಂತಿದ್ದವು.