ಶಿವಕಾಶಿಯಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ: 5 ಸಾವು , 6 ಮಂದಿ ಗಾಯ
Team Udayavani, Feb 25, 2021, 10:35 PM IST
ವಿರುಧುನಗರ: ತಮಿಳುನಾಡಿನ ಶಿವಕಾಶಿ ಸಮೀಪದ ಪಟಾಕಿ ಕಾರ್ಖಾನೆಯೊಂದರಲ್ಲಿ ಗುರುವಾರ ಸ್ಫೋಟ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಈ ಅವಘಡದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ರಾಸಾಯನಿಕಗಳನ್ನು ಸಂಗ್ರಹಿಸಿಟ್ಟಿದ್ದ 10ಕ್ಕೂ ಹೆಚ್ಚು ಶೆಡ್ಗಳು ನೆಲಸಮಗೊಂಡಿವೆ.
ದೇಶದ ಸುಡುಮದ್ದಿನ ಹಬ್ ಎಂದೇ ಖ್ಯಾತಿ ಗಳಿಸಿರುವ ಶಿವಕಾಶಿಯಲ್ಲಿ ಒಂದೇ ತಿಂಗಳಲ್ಲಿ ನಡೆದ ಎರಡನೇ ದುರಂತವಿದು. ಕಲಾಯರ್ ಕುರುಚಿಯಲ್ಲಿನ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಅಗ್ನಿ ಶಾಮಕ ದಳವು ಬೆಂಕಿಯನ್ನು ನಂದಿಸಿದೆ.
ಇದನ್ನೂ ಓದಿ:ಚಿಕ್ಕಮಗಳೂರು : ಲಾಡ್ಜ್ ನಲ್ಲಿ ವಿಷ ಸೇವಿಸಿ ಹಾಸನದ ಯುವಕ ಆತ್ಮಹತ್ಯೆ
ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಫೆ.2ರಂದು ಅಚ್ಚಂಕುಲಂ ಗ್ರಾಮದ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಿಂದ 20ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು