
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ
Team Udayavani, Mar 24, 2023, 5:41 PM IST

ರಬಕವಿ-ಬನಹಟ್ಟಿ: ಬೆಂಗಳೂರಿನಲ್ಲಿ ನೇಕಾರರ ಕುರುವಿನಶೆಟ್ಟಿ ಸಮಾಜದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ೧೦೦೮ ಶಿವಶಂಕರ ಮಹಾಸ್ವಾಮೀಜಿ ಮತ್ತು ಹಟಗಾರ ಸಮಾಜದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚನ್ನಬಸವ ದೇವರು ಆಳಂದ ಇವರ ನೇತೃತ್ವದಲ್ಲಿ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿ ಮುಂದೆ ನೇಕಾರರಿಗೆ ರಾಜ್ಯದ 5 ಕಡೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ನೀಡಬೇಕು ಹಾಗೂ ತೇರದಾಳ ಮತಕ್ಷೇತ್ರದಲ್ಲಿ ನೇಕಾರರಿಗೆ ಟಿಕೆಟ್ ನೀಡಬೇಕೆಂದು ಪ್ರತಿಭಟನೆ ನಡೆಸಲಾಯಿತು.
ನಂತರ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನಕುಮಾರ ಕಟೀಲ್, ರಾಜ್ಯ ಉಪಾಧ್ಯಕ್ಷರಾದ ನಿರ್ಮಲಕುಮಾರ ಸುರಾನಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವರಾದ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಲಾಯಿತು.
ನೇಕಾರರಿಗೆ ಮತಷ್ಟು ಬಲ : ಬಿಜೆಪಿ ಪಕ್ಷದಿಂದ ನೇಕಾರರಿಗೆ ಟಿಕೆಟ್ ನೀಡಬೇಕು ಎಂದು ತೇರದಾಳ ಮತಕ್ಷೇತ್ರದಲ್ಲಿ ಶಾಸಕ ಸಿದ್ದು ಸವದಿ ವಿರುದ್ಧ ಪ್ರಭಲ ಬೇಡಿಕೆಯಾಗಿದ್ದು, ಹಟಗಾಋ ಸಮುದಾಯದಿಂದ ರಾಜೇಮದ್ರ ಅಂಬಲಿ ಹಾಗೂ ಕುರುಹಿನಶೆಟ್ಟಿ ಸಮಾಜದಿಂದ ಮನೋಹರ ಶಿರೋಳ ಪ್ರಬಲ ಆಕಾಂಕ್ಷಿಗಳಾಗಿದ್ದು ಇವರ ಪರವಾಗಿ ಸ್ವಾಮೀಜಿಗಳು ನಿಂತಿರುವುದು ನೇಕಾರರ ಹೋರಾಟಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.
ಈ ಸಂದರ್ಭದಲ್ಲಿ ಸಮುದಾಯದ ಹಿರಿಯರಾದ ಶೇಖರ ಮಾಲಾಪುರ, ಡಾ. ಪಂಡಿತ ಪಟ್ಟಣ, ರಮೇಶ ಕೊಣೂರ, ರಾಮಣ್ಣ ಹುಲಕುಂದ, ಸಿದ್ದು ಮುನ್ನೋಳ್ಳಿ, ಸುರೇಶ ಬೀಳಗಿ, ಶಶಿಕಾಂತ ಹುನ್ನೂರ, ರಾಜೇಂದ್ರ ಅಂಬಲಿ, ಬ್ರಿಜಮೋಹನ್ ಡಾಗಾ, ಪ್ರವೀಣ ಕೋಲಾರ, ರಮೇಶ ಮಂಡಿ, ಕುಮಾರ ಕದಂ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ, ತನಿಖೆ ಮಾಡಲಿ:ಬಿ.ವೈ.ವಿಜಯೇಂದ್ರ

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
