ಕಾಫಿನಾಡಲ್ಲಿ ಹೆಚ್ಚುತ್ತಲಿದೆ ಕಾಡ್ಗಿಚ್ಚು : ಬೆಂಕಿ ನಿಯಂತ್ರಿಸಲು ಅರಣ್ಯ ಇಲಾಖೆ ಹರಸಾಹಸ

Team Udayavani, Mar 8, 2023, 12:53 PM IST

fire

ಚಿಕ್ಕಮಗಳೂರು: ಕಿಡಿಗೇಡಿಗಳ ಅಟ್ಟಹಾಸಕ್ಕೆ ಹಸಿರು ಹೊದ್ದಿರುವ ಕಾನನ (ಅರಣ್ಯ) ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗುತ್ತಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಹರ ಸಾಹಸಪಡುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಎಂದರೆ ಇಲ್ಲಿನ ಹಚ್ಚ ಹಸುರಿನ ಕಾನನ. ಮಳೆಗಾಲ, ಚಳಿಗಾಲದಲ್ಲಿ ಇಲ್ಲಿನ ಅರಣ್ಯ ಸಂಪತ್ತು ಕಣ್ತುಂಬಿಕೊಳ್ಳಲು ದೇಶ- ವಿದೇಶ ಸೇರಿದಂತೆ ರಾಜ್ಯದ ಮೂಲೆ- ಮೂಲೆಗಳಿಂದ ಜನ ಬರುತ್ತಾರೆ. ಆದರೆ ಬೇಸಿಗೆ ಕಾಲ ಆವರಿಸುತ್ತಿದ್ದಂತೆ ಕಿಡಿಗೇಡಿಗಳು ಕಾಡಿಗೆ ಕೊಳ್ಳಿ ಇಡುತ್ತಿದ್ದಾರೆ. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಮರಗಳು ಎಲೆಗಳನ್ನು ಉದುರಿಸುತ್ತವೆ. ಇಲ್ಲಿನ ಬಹುತೇಕ ಅರಣ್ಯ ಶೋಲಾ ಹುಲ್ಲುಗಾವಲು ಪ್ರದೇಶವನ್ನು ಒಳಗೊಂಡಿದ್ದು, ಬೇಸಿಗೆ ಧಗೆಗೆ ಹುಲ್ಲುಗಾವಲು ಒಣಗಿ ನಿಲ್ಲುತ್ತದೆ. ಮಳೆಗಾಲದಲ್ಲಿ ಹುಲ್ಲು ಚೆನ್ನಾಗಿ ಬೆಳೆಯಲಿ ಎಂಬ ಉದ್ದೇಶದಿಂದ ಕೆಲವು ಕಿಡಿಗೇಡಿಗಳು ಬೆಂಕಿ ಇಡುತ್ತಿರುವುದು ಕಂಡು ಬರುತ್ತಿದೆ. ಜಿಲ್ಲೆ ನಾಲ್ಕು ಅರಣ್ಯ ವಲಯಗಳನ್ನು ಒಳಗೊಂಡಿದೆ. ಚಿಕ್ಕಮಗಳೂರು ವಿಭಾಗದ ಮುಳ್ಳಯ್ಯನಗಿರಿ, ಸಿಂದಿಗೆರೆ, ಚುರ್ಚೆಗುಡ್ಡ, ಮೂಡಿಗೆರೆ ಭಾಗದ ಬಾಳೂರು (ಚಾರ್ಮಾಡಿ ಘಾಟಿ ಪ್ರದೇಶ), ಕೊಪ್ಪ ತಾಲೂಕು, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯ ಮೀಸಲು ಅರಣ್ಯಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಕಾಫಿತೋಟಗಳ ಮಾಲೀಕರು ತಮ್ಮ ತೋಟಗಳಿಗೆ ಬೆಂಕಿ ಬೀಳಬಾರದು ಎಂಬ ಉದ್ದೇಶದಿಂದ ತೋಟದ ಬದಿಗಳಲ್ಲಿ ಬೆಂಕಿ ಹಾಕುವುದರಿಂದಲೂ ಅರಣ್ಯದಲ್ಲಿ ಬೆಂಕಿ
ಆವರಿಸುತ್ತಿದೆ. ಹಾಗೇ ಕೆಲವು ಕಿಡಿಗೇಡಿಗಳು ಬೇಕಂತಲೇ ಬೆಂಕಿ ಹಾಕುತ್ತಿದ್ದಾರೆಂಬ ದೂರುಗಳು ಕೇಳಿ ಬರುತ್ತಿವೆ. ಈ ವರ್ಷ ಅರಣ್ಯದಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದ್ದು, ಇದಕ್ಕೆ ಹವಾಮಾನ ವೈಪರೀತ್ಯವೂ ಕಾರಣ ಎನ್ನಲಾಗುತ್ತಿದೆ. ಕಿಡಿಗೇಡಿಗಳು ಹಚ್ಚುತ್ತಿರುವ ಬೆಂಕಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಸಿಬ್ಬಂದಿಗೆ ಸಾಧ್ಯವಾಗುತ್ತಿಲ್ಲ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚುತ್ತಿದ್ದು, ತೇವಾಂಶ ಕಡಿಮೆ ಇದೆ. ಇದರ  ಜೊತೆಗೆ ಗಾಳಿಯೂ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆಂಕಿಯ ಕೆನ್ನಾಲಿಗೆ ಕಾಣುತ್ತಿದ್ದಂತೆ ಕಿಮೀಗಟ್ಟಲೆ ವ್ಯಾಪಿಸುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದರು. ವಾತಾವರಣದಲ್ಲಿನ ವ್ಯತ್ಯಾಸದಿಂದ ಅವರ ಶ್ರಮ ಸಮುದ್ರದಲ್ಲಿ ಹುಳಿ ಹಿಂಡಿದಂತೆ ಆಗುತ್ತಿದೆ. ದಟ್ಟ ಅರಣ್ಯ ಪ್ರದೇಶಗಳಲ್ಲೂ ಬೆಂಕಿಯ ತೀವ್ರತೆ ಇದ್ದು, ವನ್ಯಮೃಗಗಳು, ಸರೀಸೃಪಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಅರಣ್ಯದಲ್ಲಿನ ಬೆಂಕಿಯ ತೀವ್ರತೆ ಎಷ್ಟರ ಮಟ್ಟಿಗೆ ಇದೆ ಎಂದರೆ ಚಿಕ್ಕಮಗಳೂರು ತಾಲೂಕು ಸಿಂದಿಗೆರೆ ಭಾಗದಲ್ಲಿನ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೂರು ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ. ರಸ್ತೆ ಬದಿಯಲ್ಲಿ ಬೈಕ್‌ಗಳನ್ನು ನಿಲ್ಲಿಸಿ ಹೋಗಿದ್ದು, ಗಾಳಿಯ ಆರ್ಭಟಕ್ಕೆ ಬೆಂಕಿ ರಸ್ತೆ ಬದಿಗೂ ವ್ಯಾಪಿಸಿದೆ. ಅಲ್ಲಿದ್ದ ಬೈಕ್‌ಗಳಿಗೆ ಬೆಂಕಿ ತಗುಲಿದೆ. ಈ ವೇಳೆ ಮೂರು ಬೈಕ್‌ಗಳು ಬೆಂಕಿಯ ಕೆನ್ನಾಲಿಗೆಗೆ ಬೆಂದು ಹೋಗಿವೆ. ಕ್ಷಣ ಮಾತ್ರದಲ್ಲಿ ಇಂತಹದೊಂದು ಘಟನೆ ನಡೆದು ಹೋಗಿದೆ ಎಂದರೆ ಇನ್ನು ವನ್ಯಜೀವಿಗಳ, ಸರೀಸೃಪಗಳ ಪಾಡೇನು? ಎಂಬ ಚಿಂತೆ ಕಾಡುತ್ತಿದೆ. ಒಟ್ಟಾರೆ ಹಚ್ಚ ಹಸಿರಿನ ಕಾನನ, ಬೆಂಕಿಯೆಂಬ ಭಸ್ಮಾಸುರನ ಬಾಯಿಗೆ ಸಿಲುಕಿ ವಿಲಿ ವಿಲಿ ಒದ್ದಾಡುತ್ತಿದೆ.

ಕಿಡಿಗೇಡಿಗಳ ಕೃತ್ಯದಿಂದ ಕಾಡ್ಗಿಚ್ಚು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ. ಹೊಸ ಹುಲ್ಲು ಚೆನ್ನಾಗಿ ಬರಲಿ. ಅಜ್ಞಾನದಿಂದ ಕೆಲವರು ಇಂತಹ ಕೃತ್ಯ ಎಸಗುತ್ತಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ
ಮುಂದಾಗಿದ್ದು, ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ವಾತಾವರಣದಲ್ಲಿ ಉಷ್ಠಾಂಶ ಜಾಸ್ತಿಯಾಗಿದೆ ಹಾಗೂ ತೇವಾಂಶ ಕಡಿಮೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಬೀಸುತ್ತಿರುವುದರಿಂದ ಬೆಂಕಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಬೆಂಕಿ ತಡೆಗೆ ಹೆಚ್ಚಿನ ಸಿಬ್ಬಂದಿ ಮತ್ತು ವಾಹನ ಗಳನ್ನು ನಿಯೋಜಿಸಲಾಗಿದೆ ಮತ್ತು ತಂಡಗಳನ್ನು ರಚಿಸಲಾಗಿದೆ. ಆದರೆ ಹವಾಮಾನ ವೈಪರೀತ್ಯದಿಂದ ಬೆಂಕಿಯನ್ನು ಕಂಟ್ರೋಲ್‌ಗೆ ತರಲು ನಿಧಾನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಹೆಚ್ಚಿಸಿಕೊಳ್ಳಲಾಗುತ್ತಿದೆ.
∙ಕ್ರಾಂತಿ, ಡಿಎಫ್‌ಒ

ಸಂದೀಪ ಜಿ.ಎನ್‌. ಶೇಡ್ಗಾರ್‌

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.