ಅರುಣಾಚಲ ಪ್ರದೇಶದ ಮಾಜಿ ರಾಜ್ಯಪಾಲ ಮಾತಾ ಪ್ರಸಾದ್ ನಿಧನ
Team Udayavani, Jan 20, 2021, 6:23 PM IST
ಲಕ್ನೋ: ಅರುಣಾಚಲ ಪ್ರದೇಶದ ಮಾಜಿ ರಾಜ್ಯಪಾಲ, ಪದ್ಮಭೂಷಣ ಪುರಸ್ಕೃತ ಮಾತಾ ಪ್ರಸಾದ್ (95) ಅವರು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.
ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮಾತಾ ಪ್ರಸಾದ್ ಮೂಲತಃ ಉ.ಪ್ರ.ದ ಜೌನ್‌ಪುರ್ ಜಿಲ್ಲೆಯವರು. ಉತ್ತರ ಪ್ರದೇಶದಲ್ಲಿ 1988-89ರಲ್ಲಿದ್ದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 1993ರಲ್ಲಿ ಅರುಣಾಚಲ ಪ್ರದೇಶ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಉ.ಪ್ರ. ಗವರ್ನರ್ ಆನಂದಿಬೆನ್ ಪಟೇಲ್ ಸೇರಿದಂತೆ ಹಲವು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೃಷಿಗೆ ಮಾರಕವಾದ ಕಾಯ್ದೆ ಹಿಂಪಡೆಯದಿದ್ದರೆ ರೈತರ ದಂಗೆ ಖಚಿತ : ಸರಕಾರಕ್ಕೆ ಸಿದ್ದು ಎಚ್ಚರಿಕೆ