ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ ನಿಧನ
Team Udayavani, Jan 17, 2022, 1:52 PM IST
ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ (94) ಸೋಮವಾರ ನಿಧನ ಹೊಂದಿದ್ದಾರೆ.
ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಶರಣಗೌಡ ಇನಾಮದಾರ ಅವರು ಕಟ್ಟಿದ ಯುವಪಡೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ನಿಜಾಮ್ ಸರ್ಕಾರದ ದುರಾಡಳಿತ ವಿರುದ್ಧ ಹೋರಾಡಿದ್ದರು.
ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವ-ಗ್ರಾಮ ಮಳ್ಳಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಮೂಲಕ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.