ಚೀನಾದಿಂದ ಹೊರಬರಲು ಜಾಗತಿಕ ಕಂಪನಿಗಳ ಯೋಜನೆ
Team Udayavani, Apr 29, 2023, 7:48 AM IST
ಬೀಜಿಂಗ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸರ್ಕಾರ ಉದ್ಯಮಗಳ ಮೇಲೆ ತನ್ನ ಹಿಡಿತವನ್ನು ಸಾಧಿಸುತ್ತಿರುವ ನಡುವೆಯೇ ಭ್ರಷ್ಟಾಚಾರ ವಿರೋಧಿ, ಭದ್ರತೆ ಮತ್ತು ಇತರೆ ತನಿಖೆಗಳಿಗೆ ಸಂಬಂಧಿಸಿದಂತೆ ವಿದೇಶಿ ಕಂಪನಿಗಳು ತೀವ್ರ ಒತ್ತಡವನ್ನು ಅನುಭವಿಸುತ್ತಿವೆ. ಶಾಂಘೈನ ತನ್ನ ಕಚೇರಿಯಲ್ಲಿ ಇದೇ ವಾರ ತಮ್ಮ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಯಾವ ಕಾರಣಕ್ಕೆ ಎಂಬುದು ಪೊಲೀಸರು ತಿಳಿಸಿಲ್ಲ ಎಂದು “ಬೈನ್ ಆ್ಯಂಡ್ ಕೋ” ಕಂಪನಿ ಹೇಳಿದೆ.
ಕಳೆದ ತಿಂಗಳು ಮಿಂಟ್ಜ್ ಗ್ರೂಪ್ನ ಬೀಜಿಂಗ್ ಕಚೇರಿ ಮೇಲೆ ದಾಳಿ ನಡೆಸಿದ ಪೊಲೀಸರು, ಐವರು ಉದ್ಯೋಗಿಗಳನ್ನು ಬಂಧಿಸಿದ್ದರು. ಇನ್ನೊಂದೆಡೆ, ಬೇಹುಗಾರಿಕೆ ಆರೋಪದಲ್ಲಿ ಜಪಾನಿ ಔಷಧ ತಯಾರಿಕಾ ಕಂಪನಿಯ ಉದ್ಯೋಗಿಯನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ಮೆಮೊರಿ ಚಿಪ್ ತಯಾರಿಕಾ ಕಂಪನಿ “ಮೈಕ್ರಾನ್ ಇಂಕ್’ನ ಭದ್ರತಾ ಪರಿಶೀಲನೆ ನಡೆಸಲು ಚೀನಾ ಸರ್ಕಾರ ಸೂಚಿಸಿತು. ಕೊರೊನಾ ನಂತರ ಚೀನಾ ಕಡೆ ಉದ್ಯಮಿಗಳ ಒಲವು ಸೆಳೆಯಲು ಅಲ್ಲಿನ ಸರ್ಕಾರ ಪ್ರಯತ್ನಿಸುತ್ತಿರುವ ನಡುವೆಯೇ ಈ ಬೆಳವಣಿಗೆಯು ಜಾಗತಿಕ ಕಂಪನಿಗಳು ಚೀನಾದಿಂದ ಹೊರಬಂದು, ಭಾರತ ಸೇರಿದಂತೆ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು