DCC ಬ್ಯಾಂಕ್‌ಗಳಿಗೆ 10ಲಕ್ಷದ ವರೆಗೂ ಸರ್ಕಾರಿ ಷೇರು ನೀಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್
Team Udayavani, Mar 16, 2021, 9:00 PM IST
ವಿಧಾನ ಪರಿಷತ್: ಡಿಸಿಸಿ ಬ್ಯಾಂಕ್‌ಗಳಿಗೆ ಸರ್ಕಾರದಿಂದ 10 ಲಕ್ಷದವರೆಗೂ ಷೇರು ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಹೀಗಾಗಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರಿ ಪ್ರತಿನಿಧಿಗಳು ಇರುತ್ತಾರೆ. ಆದರೆ, ಅವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಡ ಹೇರುವುದಿಲ್ಲ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿ, ಸಹಕಾರಿ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಜತೆಗೆ ನಾಮನಿರ್ದೇಶಿತ ಪ್ರತಿನಿಧಿಗಳನ್ನು ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಹಾಗೂ ನಾಮನಿರ್ದೇಶಿತ ವ್ಯಕ್ತಿಯನ್ನು ಅಧ್ಯಕ್ಷ, ಉಪಾಧ್ಯಕ್ಷನನ್ನಾಗಿ ಮಾಡಲು ಸರ್ಕಾರ ಅಥವಾ ಇಲಾಖೆ ಯಾವುದೇ ಒತ್ತಡ ಹೇರುವುದಿಲ್ಲ ಎಂದರು.
ಮರಿತಿಬ್ಬೇಗೌಡ ಮಾತನಾಡಿ, ಸಹಕಾರಿ ಕಾಯ್ದೆಯ ಸೆಕ್ಷನ್ 20ರ ತಿದ್ದುಪಡಿ ಮಾಡುವ ಸಂಬಂಧ ತಜ್ಞರ ಸಮಿತಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ? ಚುನಾಯಿತ ಪ್ರತಿನಿಧಿಗಳ ಬದಲಿಗೆ ನಾಮನಿರ್ದೇಶಿತ ಸದಸ್ಯರನ್ನು ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿಸಲು ಒತ್ತಡ ಹೆಚ್ಚುತ್ತಿದೆ. ಈ ರೀತಿ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ ಎಂದು ಹೇಳಿದರು.
ಈ ತಿದ್ದುಪಡಿ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ ಎಂದು ಸಚಿವರು ಉತ್ತರಿಸಿದರು.
ಇದನ್ನೂ ಓದಿ :ಉಪ ಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ : ಬಸವರಾಜ ಬೊಮ್ಮಾಯಿ