ಕಾರಿಗೆ ಸರ್ಕಾರಿ ಬಸ್ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು
Team Udayavani, Jul 7, 2022, 3:01 PM IST
ತುಮಕೂರು: ಅತೀ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಲಾಪುರ ಮತ್ತಿಹಳ್ಳಿ ಗೇಟ್ ಬಿ ಎಚ್ ರಸ್ತೆ ನಡೆದಿದೆ.
ಮೃತಪಟ್ಟವರನ್ನು ಸಿದ್ದರಾಜು (38) ಮೋಹನ್( 35) ರಾಜಣ್ಣ (28 ) ಎಂದು ಗುರುತಿಸಲಾಗಿದ್ದು, ಗಾಯಗೊಂಡವರಿಗೆ ತಿಪಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿದರೆಗುಡಿ ನಿಂದ ತಿಪಟೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ತಿಪಟೂರಿನಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ: ನ್ಯಾಯ ಸಿಗುವ ನಂಬಿಕೆ ಇಲ್ಲ; ಹರ್ಷ ಸಹೋದರಿ ಅಶ್ವಿನಿ ಅಳಲು
ತಿಪಟೂರು ಪೊಲೀಸ್ ಠಾಣಾ ವ್ಯಾಪ್ರತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಗೊಂಡವರನ್ನು ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವೀಣ್ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್ ಕುಮಾರ್
ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಿಗೆ: ಪರೀಕ್ಷೆ ವೇಳೆ ಸ್ಮಾರ್ಟ್ ವಾಚ್ ಬಳಸಿದ್ದವ ಸೆರೆ
ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ