ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧಾರ
Team Udayavani, Jan 20, 2022, 7:34 PM IST
ಬೆಂಗಳೂರು : ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜ್ವರದಿಂದ ಬಳಲುತ್ತಿದ್ದ ಕಣವಿ ಜನವರಿ ೧೪ ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಸಂದರ್ಭದಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ಖಚಿತವಾಗಿದೆ.ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡುತ್ತಿರುವುದು ತಿಳಿದುಬಂದಿದೆ
ಕಣವಿ ಅವರು ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು, ಹಾಗೂ ಅವರು ರಾಜ್ಯದ ಬೌದ್ಧಿಕ ಸಂಪತ್ತು. ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ. ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ಸಿಎಂ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು
ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್ ಮಿತ್ರ’ರು
ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್