ಗ್ರಾಮ ಲೆಕ್ಕಿಗ ಇನ್ನು ಗ್ರಾಮ ಆಡಳಿತ ಅಧಿಕಾರಿ: ಸರ್ಕಾರ ಆದೇಶ
Team Udayavani, Dec 7, 2022, 7:04 AM IST
ಬೆಂಗಳೂರು: ಕಂದಾಯ ಇಲಾಖೆಯ “ಗ್ರಾಮ ಲೆಕ್ಕಿಗ’ ಹುದ್ದೆಯನ್ನು “ಗ್ರಾಮ ಆಡಳಿತ ಅಧಿಕಾರಿ’ ಎಂದು ಮರು ಪದನಾಮಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಗ್ರಾಮ ಲೆಕ್ಕಿಗರ ಹುದ್ದೆಯನ್ನು “ಗ್ರಾಮ ಆಡಳಿತ ಅಧಿಕಾರಿ’ ಎಂದು ಬದಲಾಯಿಸುವಂತೆ ಕಂದಾಯ ಸಚಿವರು ಟಿಪ್ಪಣಿ ನೀಡಿದ್ದರು. ಈ ಸಂಬಂಧ ಎಲ್ಲ ಪ್ರಾದೇಶಿಕ ಆಯುಕ್ತರ ಅಭಿಪ್ರಾಯ ಕೇಳಲಾಗಿತ್ತು. ಗ್ರಾಮ ಲೆಕ್ಕಿಗರ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಿಸುವಂತೆ ರಾಜ್ಯದ ನಾಲ್ಕೂ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರು ವರದಿ ಸಲ್ಲಿಸಿದ್ದರು.
ಅದರಂತೆ ಇನ್ನು ಮುಂದೆ “ಗ್ರಾಮ ಲೆಕ್ಕಿಗ’ ಹುದ್ದೆಯನ್ನು “ಗ್ರಾಮ ಆಡಳಿತ ಅಧಿಕಾರಿ’ ಎಂದು ಬದಲಿಸಲಾಗಿದ್ದು, ಈ ಬದಲಾವಣೆಯ ಪ್ರಸ್ತಾವನೆ ಯನ್ನು ಕಂದಾಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅನ್ವಯವಾಗುವಂತೆ ಸೂಕ್ತ ತಿದ್ದುಪಡಿ ತರಲು ಪ್ರತ್ಯೇಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ