ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ರೈಲು; 3 ಸಾವು, ರಕ್ಷಣಾ ಕಾರ್ಯಾಚರಣೆ
Team Udayavani, Jan 13, 2022, 6:23 PM IST
ಕೋಲ್ಕತಾ : ಗುವಾಹಟಿ-ಬಿಕಾನೇರ್ ಎಕ್ಸ್ಪ್ರೆಸ್ ಬಂಗಾಳದ ದೊಮೊಹನಿ ಬಳಿ ಗುರುವಾರ ಸಂಜೆ ಹಳಿತಪ್ಪಿದ್ದು, 3 ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರೈಲು ಗುವಾಹಟಿ ಕಡೆಗೆ ಸಾಗುತ್ತಿತ್ತು
ರೈಲಿನ 12 ಬೋಗಿಗಳು ಹಳಿತಪ್ಪಿದ ನಂತರ ಕನಿಷ್ಠ 3 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಸಿಕ್ಕಿಬಿದ್ದಿದ್ದಾರೆ.
ನ್ಯೂ ದೋಮೊಹನಿ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಗ್ಯಾಸ್ ಕಟ್ಟರ್ಗಳನ್ನು ಬಳಸಲಾಗುತ್ತಿದೆ ಎಂದು ವರದಿಯಾಗಿದೆ. ರೈಲ್ವೇ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ರೈಲು ಹಳಿತಪ್ಪಿದೆ ಎಂದು ಮೂಲಗಳು ತಿಳಿಸಿವೆ, ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ತಲುಪಿವೆ.
ಬೋಗಿಗಳು ಹಳಿತಪ್ಪಿದ ನಂತರ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!