ಜ್ಞಾನವಾಪಿ ಮಸೀದಿ ಸಮೀಕ್ಷೆ ಪ್ರಕರಣ ವಾರಾಣಸಿ ಕೋರ್ಟ್ ಗೆ ವರ್ಗ: ಸುಪ್ರೀಂ ಆದೇಶ
ಕೋರ್ಟ್ ಗೆ ಸಲ್ಲಿಸಿದ ಮೇಲೆ, ಅದರಲ್ಲಿ ಆಯ್ದ ವಿಷಯಗಳನ್ನು ಮಾತ್ರ ಸೋರಿಕೆ ಮಾಡಲಾಗಿದೆ.
Team Udayavani, May 20, 2022, 4:22 PM IST
ನವದೆಹಲಿ: ಜ್ಞಾನವಾಪಿ ಮಸೀದಿ ಸಂಕೀರ್ಣ ವಿಡಿಯೋ ಸಮೀಕ್ಷೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶುಕ್ರವಾರ (ಮೇ 20), ಮಸೀದಿ ಸಂಕೀರ್ಣದೊಳಗೆ ಸಮೀಕ್ಷೆ ನಡೆಸುವುದಕ್ಕೆ ತಡೆ ನೀಡಲು ನಿರಾಕರಿಸಿದ್ದು, ಜ್ಞಾನವಾಪಿ ಮಸೀದಿ ಪ್ರಕರಣವನ್ನು ವಾರಾಣಸಿ ಕೋರ್ಟ್ ಗೆ ವರ್ಗಾಯಿಸಿ ಮಹತ್ವದ ಆದೇಶ ನೀಡಿದೆ.
ಮಸೀದಿ ವಿಡಿಯೋ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ವಾರಾಣಸಿ ಜಿಲ್ಲಾ ನ್ಯಾಯಾಧೀಶರು ನಡೆಸಲಿ ಎಂದು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಹೇಳಿದೆ.
ಪುರಾಣ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಸಮೀಕ್ಷೆ ನಡೆಸುವಂತೆ ವಾರಾಣಸಿ ಜಿಲ್ಲಾ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಅಂಜುಮಾನ್ ಇಂತೆಝಾಮಿಯಾ ಮಸ್ಜಿದ್ ಸಮಿತಿ ಸಲ್ಲಿಸಿದ್ದ ಅರ್ಜಿಯ ವಾದವನ್ನು ಸುಪ್ರೀಂಕೋರ್ಟ್ ಆಲಿಸಿತ್ತು.
ಒಂದು ಬಾರಿ ಆಯೋಗ ವರದಿಯನ್ನು ಕೋರ್ಟ್ ಗೆ ಸಲ್ಲಿಸಿದ ಮೇಲೆ, ಅದರಲ್ಲಿ ಆಯ್ದ ವಿಷಯಗಳನ್ನು ಮಾತ್ರ ಸೋರಿಕೆ ಮಾಡಲಾಗಿದೆ. ನ್ಯಾಯಾಲಯದಲ್ಲಿ ನ್ಯಾಯಾಧೀಶರು ವರದಿಯನ್ನು ತೆರೆಯುವ ಮುನ್ನ ಮಾಧ್ಯಮಗಳಿಗೆ ವಿಷಯವನ್ನು ಸೋರಿಕೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಈ ಸಂದರ್ಭದಲ್ಲಿ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ…