ಮಂಕುಬೂದಿ ಎರಚಿ…; ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೆಚ್ ಡಿಕೆ ಕಿಡಿ

ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ!

Team Udayavani, Jul 3, 2022, 9:00 PM IST

HDK

ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್‌ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್‌ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್‌ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.

ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ ಕೊಡಬೇಕಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅದೊಂದು ಭ್ರಷ್ಟಕೂಪ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಒಂದರಲ್ಲೇ ಸುಮಾರು ೩೦ ಸಾವಿರಕ್ಕೂ ಹೆಚ್ಚು ಭೂಮಿಯನ್ನು ಭೂಗಳ್ಳರು ಕಬಳಿಸಿದ್ದಾರೆ. ಅದನ್ನು ಮರು ವಶಪಡಿಸಿಕೊಂಡರೆ ಲಕ್ಷಾಂತರ ಬಡವರಿಗೆ ಮನೆ ಕಟ್ಟಿಕೊಡಬಹುದು. ಅಂಥ ಕೆಲಸವನ್ನು ಬಿಡಿಎ ಮಾಡುತ್ತಿಲ್ಲ. ನನಗೊಂದು ಅವಕಾಶ ಕೊಟ್ಟು ನೋಡಿ. ಬೆಂಗಳೂರು ನಗರವನ್ನು ಅಭಿವೃದ್ಧಿಯ ಹಳಿಯ ಮೇಲೆ ತಂದು ನಿಲ್ಲಿಸುತ್ತೇನೆ ಎಂದು ಅವರು ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ಎಲ್ಲ ಪ್ರದೇಶಗಳು ಸಮಾನವಾಗಿ ಅಭಿವೃದ್ಧಿ ಆಗುತ್ತಿಲ್ಲ. ಶ್ರೀಮಂತರು ವಾಸ ಮಾಡುವ ಪ್ರದೇಶಗಳಿಗೆ ಎಲ್ಲ ಅನುಕೂಲಗಳಿದ್ದರೆ, ಬಡವರ ಬಡಾವಣೆಗಳಿಗೆ ಕೊನೆಪಕ್ಷ ರಸ್ತೆಗಳಿಗೆ ಡಾಂಬರು ಇಲ್ಲ, ವಿದ್ಯುತ್‌ ದೀಪಗಳಿಲ್ಲ. ಯಲಹಂಕ ವಿಧಾನಸಭೆ ಕ್ಷೇತ್ರದ ಬೆಟ್ಟಹಳ್ಳಿ ಗ್ರಾಮಕ್ಕೆ ಹೋದರೆ ರಾಜ್ಯ ಸರಕಾರದ ನಿಜವಾದ ಅಭಿವೃದ್ಧಿ ಮಾದರಿ ಕಣ್ಣಿಗೆ ಕಾಣುತ್ತದೆ ಎಂದು ಹರಿಹಾಯ್ದರು ಕುಮಾರಸ್ವಾಮಿ.

ನಗರದ ಅಭಿವೃದ್ಧಿ, ಅನುದಾನ ಹಂಚಿಕೆಯಲ್ಲಿ ಬಿಜೆಪಿ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಮಾಜಿ ಸಚಿವ ಕಟ್ಟಾ ಮೇಲೆ ಚಾಟಿ ಬೀಸಿದ ಹೆಚ್ ಡಿಕೆ

ಹೆಬ್ಬಾಳ ವಿಧಾನಸಭೆ ಕ್ಷೇತ್ರದಿಂದ ಗೆದ್ದು ಮಂತ್ರಿಯಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಕಟುವಾದ ಟೀಕೆ ಮಾಡಿದ ಮಾಜಿ ಮುಖ್ಯಮಂತ್ರಿ, ಕಟ್ಟಾ ಅವರು ಈಗ ಹೆಣ್ಣುಮಕ್ಕಳಿಗೆ ಆರಶಿಣ-ಕುಂಕುಮ ಕೊಡುತ್ತೇನೆ, ಲಲಿತಾ ಸಹಸ್ರನಾಮ ಕಾರ್ಯಕ್ರಮ ಏರ್ಪಡಿಸುತ್ತೇನೆ ಎಂದು ಈಗ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಿಂದ ಜನರ ಬದುಕು ಹಸನಾಗುತ್ತದೆಯೇ? ಅಲ್ಲೆಲ್ಲ ದೊಡ್ಡದಾಗಿ ಮಹಿಳೆಯರನ್ನು ಸೇರಿಸಿ ಪೂಜೆ ಪುನಸ್ಕಾರ ಅಂತ ಹೇಳಿ ಮಂಕುಬೂದಿ ಎರಚಿ, ಗೆದ್ದುಹೋಗಿ ಮಂತ್ರಿ ಆಗುತ್ತಾರೆ. ಆಮೇಲೆ, ಸರಕಾರಿ ಭೂಮಿಯನ್ನು ಲಪಟಾಯಿಸಿ ಬಳಿಕ ಜಾಮೀನಿಗಾಗಿ ಕೋರ್ಟು, ಕಚೇರಿ ಅಂತ ಅಲೆಯುತ್ತಾರೆ ಎಂದು ಪ್ರಹಾರ ನಡೆಸಿದರು.

ಬೆಂಗಳೂರಿನಲ್ಲಿ ಇವತ್ತು ಅನೇಕ ರಾಜಕಾರಣಿಗಳು, ಸಾರ್ವಜನಿಕ ಹಾಗೂ ಬಡಬಗ್ಗರ ಭೂಮಿಯನ್ನು ಕೊಳ್ಳೆ ಹೊಡೆದು ನೂರಾರು ಕೋಟಿ ಮಾಡಿದ್ದಾರೆ. ಅದೇ ಪಾಪದ ಹಣದಿಂದ ಫುಡ್ ಕಿಟ್‌, ಸಣ್ಣಪುಟ್ಟ ಪ್ರಮಾಣದ ಭಕ್ಷೀಸು ನೀಡಿ ಚುನಾವಣೆ ಗೆಲ್ಲುತ್ತಿದ್ದಾರೆ. ಇಂಥ ಆಮಿಷಗಳಿಗೆ ಜನರು ಮಾರುಹೋಗಬಾರದು. ಹಣ ಪಡೆದು ಸಭೆ ಸಮಾರಂಭಗಳಿಗೆ ಹೋಗಬಾರದು ಎಂದು  ಕರೆ ನೀಡಿದರು.

ಬೆಂಗಳೂರಿನಲ್ಲಿ ಬಡವರ ಬಂಧು ಕಾರ್ಯಕ್ರದ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ನೆರವಾದೆ. 25 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದೆ. ಇದೆಲ್ಲವನ್ನೂ ಫಲಾನುಭವಿಗಳ ಹೆಸರಿನ ಸಮೇತ ದಾಖಲೆ ಕೊಡಬಲ್ಲೆ, ನರೇಂದ್ರ ಮೋದಿ ಅವರಂತೆ ನಾನು ಬರೀ ಭಾಷಣ ಮಾಡಲ್ಲ ಎಂದರಲ್ಲದೆ, ಮೋದಿ ಹಿಂದೆ ಸುತ್ತುವ ಆತ್ಮೀಯನೊಬ್ಬ ಗಂಟೆಗೆ 53ಕೋಟಿ ದುಡಿಯುತ್ತಿದ್ದಾನಂತೆ. ಅದು ಹೇಗೆ? ಯಾವ ರೀತಿ? ಇಂಥವರನ್ನು ತೋರಿಸಿ ಭಾರತ ಉದ್ಧಾರವಾಗಿದೆ ಎಂದು ಜಗತ್ತಿಗೆ ತೋರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಮಾತನಾಡಿದರು. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮೊಯಿದ್ದೀನ್‌ ಅಲ್ತಾಫ್‌, ದಾಸರಹಳ್ಳಿ ಶಾಸಕ ಮಂಜುನಾಥ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಹೆಚ್.ಎಂ.ರಮೇಶ್‌ ಗೌಡ ಸೇರಿದಂತೆ ಪಕ್ಷದ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು ಜನತಾಮಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದಕ್ಕೂ ಮೊದಲು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ನಡೆದ ಜನತಾಮಿತ್ರ ಜಾಥ ಮತ್ತು ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸ್ಥಳೀಯ ಶಾಸಕ ಮಂಜುನಾಥ್ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.