ಇಂದು ಹಂಪಿ ಸರಳ ಉತ್ಸವ : ತುಂಗಾರತಿಗೆ ಭರದ ಸಿದ್ಧತೆ


Team Udayavani, Nov 13, 2020, 10:33 AM IST

ಇಂದು ಹಂಪಿ ಸರಳ ಉತ್ಸವ : ತುಂಗಾರತಿಗೆ ಭರದ ಸಿದ್ಧತೆ

ಹೊಸಪೇಟೆ: ವಿಜಯನಗರ ವೈಭವ ಸಾರುವ ಹಂಪಿ ಉತ್ಸವ ನ.13ರಂದು ಶುಕ್ರವಾರ ನಡೆಯಲಿದೆ. ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಹಂಪಿಯ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದ ಬಳಿ ನ.13 ರಂದು ಸಂಜೆ 4ಕ್ಕೆ ಚಾಲನೆ ನೀಡಲಿದ್ದಾರೆ. ಕೋವಿಡ್‌ ಮಾರ್ಗಸೂಚಿ ಅನ್ವಯವೇ ಕಾರ್ಯಕ್ರಮ ನಡೆಯಲಿದೆ.

ಶೋಭಾಯಾತ್ರೆ: ಹಂಪಿಯ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ವಿವಿಧ ಜಾನಪದ ಕಲಾ ತಂಡಗಳಿಂದ ಶೋಭಾಯಾತ್ರೆ ನಡೆಯಲಿದೆ. ವಿವಿಧ ತಾಲೂಕುಗಳಿಂದ ವಿವಿಧ ಪ್ರಕಾರದ ಜಾನಪದ ಕಲಾ ತಂಡಗಳ ಪ್ರದರ್ಶನ ಶೋಭಾಯಾತ್ರೆಗೆ ಮೆರುಗು ನೀಡಲಿದೆ. ಇದಾದ ನಂತರ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ವಿಶೇಷ
ಪೂಜೆ ನೆರವೇರಲಿದೆ.

ತುಂಗಾರತಿ: ಹಂಪಿಯ ತುಂಗಭದ್ರಾ ದಡದ ವೇದಿಕೆ ಬಳಿ ನ.13 ರಂದು ಸಂಜೆ 7ಕ್ಕೆ ತುಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಹಂಪಿ ಉತ್ಸವದಲ್ಲಿ ನಡೆದಂತೆ ಈ ಹಂಪಿ ಉತ್ಸವದಲ್ಲಿಯೂ ತುಂಗಾ ಆರತಿ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್‌. ಆನಂದಸಿಂಗ್‌ ಹಾಗೂ ಮುಖ್ಯ ಅತಿಥಿಗಳು, ಅತಿಥಿಗಳು ಮತ್ತು ವಿಶೇಷ
ಆಹ್ವಾನಿತರು ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ:ಬಳ್ಳಾರಿ ಪಾಲಿಕೆ ನೂತನ ಆಯುಕ್ತರಾಗಿ ಪ್ರೀತಿ ಗೆಹ್ಲೋಟ್ ನಿಯೋಜನೆ

ಕಲಾತಂಡಗಳು: ಬಳ್ಳಾರಿ ತಾಲೂಕಿನ ಮೋಹನ್‌ ಮತ್ತು ತಂಡದವರ ತಷಾರಂಡೋಲ್‌, ಕುರುಗೋಡು ಚನ್ನಸ್ವಾಮಿ ಮತ್ತು ತಂಡದಿಂದ ಹಗಲುವೇಷ ಹಗರಿಬೊಮ್ಮನಹಳ್ಳಿಯ ಏಣಿಗಿ ರಾಮಪ್ಪ ಮತ್ತು ತಂಡದವರ ಹಲಗೆ ವಾದನ, ಸಂಡೂರು
ಚಂದ್ರಶೇಖರ್‌ ಮತ್ತು ತಂಡದವರಿಂದ ಡೊಳ್ಳುಕುಣಿತ, ಬಳ್ಳಾರಿಯ ಎಂ.ನಾಗರಾಜ ಸ್ವಾಮಿ ಮತ್ತು ತಂಡದವರಿಂದ ವೀರಗಾಸೆ ಹಾಗೂ ದೊಡ್ಡಬಸಪ್ಪ ಮತ್ತು ತಂಡದವರಿಂದ ನಾಡಗೀತೆ, ಹಳೇದರೊಜಿ ಅಶ್ವರಾಮಣ್ಣ ಮತ್ತು ತಂಡದವರಿಂದ ಹಗಲುವೇಷ
ಸಿರಗುಪ್ಪ ದೊಡ್ಡರಾಮಣ್ಣ ಮತ್ತು ತಂಡದವರಿಂದ ಸಿಂದೋಳ್‌ ಕುಣಿತ, ಹೊಸಪೇಟೆಯ ಶರಣಪ್ಪ ಮತ್ತು ತಂಡ ಕಹಳೆ ವಾದನ, ನಾರಾಯಣಪ್ಪ ಮತ್ತು ತಂಡದವರಿಂದ ನಾದಸ್ವರ, ಆಂಜನೇಯ ಮತ್ತು ತಂಡದವರಿಂದ ಡೊಳ್ಳು ಕುಣಿತ, ಕಂಪ್ಲಿಯ ಕೆ.ಅಂಜಲಿ ಮತ್ತು ತಂಡದವರಿಂದ ಹಕ್ಕಿ ಪಿಕ್ಕಿ ಬುಡಕಟ್ಟು ನೃತ್ಯ, ಹೊಸಪೇಟೆಯ ಏಸುಪ್‌ ಮತ್ತು ತಂಡದವರಿಂದ ಮರಗಾಲುಕುಣಿತ, ಅಮೃತಾ ಮತ್ತು ತಂಡದವರಿಂದ ಶಾಸ್ತ್ರೀಯ ನೃತ್ಯ, ಹಡಗಲಿ ಮಲ್ಲಯ್ಯ ಮತ್ತು ತಂಡದವರ ಗೊರವರ ಕುಣಿತ, ಕೊಟ್ಟೂರು ವೀರಭದ್ರೇಶ್ವರ ವಾದ್ಯವೃಂದ ನಂದಿಧ್ವಜ ಕುಣಿತ, ಹರಪನಹಳ್ಳಿ ವಿಶ್ವಕಲಾ ರೈತ ಭಜನಾ ಸಂಘದಿಂದ
ಕೀಲು ಕುದುರೆ, ಕೂಡ್ಲಿಗಿ ದುರುಗಮ್ಮ ಮತ್ತು ತಂಡದಿಂದ ಮಹಿಳಾ ಡೊಳ್ಳು ಕುಣಿತ ಪ್ರದರ್ಶನಗಳು ಈ ಬಾರಿಯ ಹಂಪಿ ಉತ್ಸವದಲ್ಲಿ ನಡೆಯಲಿವೆ.

ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವೈ. ದೇವೇಂದ್ರಪ್ಪ, ಜಿ.ಎಂ. ಸಿದ್ದೇಶ್ವರ, ಕರಡಿ ಸಂಗಣ್ಣ, ಸೈಯದ್‌
ನಾಸೀರ್‌ ಹುಸೇನ್‌, ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಈ. ತುಕಾರಾಂ, ಬಿ.ನಾಗೇಂದ್ರ, ಎನ್‌. ವೈ. ಗೋಪಾಲಕೃಷ್ಣ, ಭೀಮಾನಾಯ್ಕ ಎಲ್‌. ಬಿ.ಪಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ. ಕರುಣಾಕರರೆಡ್ಡಿ, ಜಿ. ಸೋಮಶೇಖರರೆಡ್ಡಿ, ಎಂ.ಎಸ್‌.
ಸೋಮಲಿಂಗಪ್ಪ, ಜೆ.ಎನ್‌.ಗಣೇಶ್‌, ಡಾ. ಚಂದ್ರಶೇಖರ ಬಿ.ಪಾಟೀಲ, ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ವಿ. ರಾಮಚಂದ್ರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಾದೇಶಿಕ ಆಯುಕ್ತ ಎನ್‌.ವಿ. ಪ್ರಸಾದ್‌, ಬಳ್ಳಾರಿ ವಲಯದ ಪೊಲೀಸ್‌ ಮಹಾ ನಿರೀಕ್ಷಕ ಎಸ್‌. ನಂಜುಂಡಸ್ವಾಮಿ ಮತ್ತು ಕಎಸ್‌.ರಂಗಪ್ಪ, ಕಾಳಿ ಆಗಮಿಸಲಿದ್ದಾರೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.