Haryana Polls:ಬಿಜೆಪಿ 2ನೇ ಪಟ್ಟಿ ಬಿಡುಗಡೆ-ಫೋಗಟ್ ವಿರುದ್ದ ಕ್ಯಾಪ್ಟನ್ ಯೋಗೇಶ್ ಬೈರಾಗಿ
ಪುಂಡ್ರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿದೆ.
Team Udayavani, Sep 10, 2024, 4:29 PM IST
ನವದೆಹಲಿ: ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (BJP) ಮಂಗಳವಾರ (ಸೆ.10) ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಈ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಅಖಾಡವಾಗಿರುವ ಜೂಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ವಿರುದ್ಧ ಬಿಜೆಪಿ ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರನ್ನು ಕಣಕ್ಕಿಳಿಸುವ ಮೂಲಕ ಕುತೂಹಲ ಮೂಡಿಸಿದೆ.
ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರ ಫೇಸ್ ಬುಕ್ ಖಾತೆಯಲ್ಲಿನ ಮಾಹಿತಿಯಂತೆ, ಭಾರತೀಯ ಜನತಾ ಪಕ್ಷದ ಯುವ ಘಟಕದ ಉಪಾಧ್ಯಕ್ಷರಾಗಿ ಮತ್ತು ಪಕ್ಷದ ಹರ್ಯಾಣ ಕ್ರೀಡಾ ವಿಭಾಗದ ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.
ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ನಿಕಟವಾಗಿರುವ ಪವನ್ ಸೈನಿ ಅವರನ್ನು ನರೈನ್ ಗಢ್ ಕ್ಷೇತ್ರದಿಂದ ಕಣಕ್ಕಿಳಿಸಿದ್ದು, ಸತ್ಪಾಲ್ ಜಂಬಾ ಅವರನ್ನು ಪುಂಡ್ರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿದೆ.
ಯೋಗೇಂದ್ರ ರಾಣಾ ಅವರನ್ನು ಅಸ್ಸಾಂಧ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಬಿಜೆಪಿ ಹಾಲಿ ಶಾಸಕ ನಿರ್ಮಲ್ ರಾಣಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಗನೌರ್ ಕ್ಷೇತ್ರದಲ್ಲಿ ದೇವೇಂದರ್ ಕೌಶಿಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಹಾಲಿ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಡೋಲಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಕೃಷ್ಣ ಗೆಹ್ಲವಾಟ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest; ದಂಧೆ ನಡೆಸುತ್ತಿದ್ದ ತೈವಾನ್ ನ ನಾಲ್ವರು ಸೇರಿ 17 ಮಂದಿ ಬಂಧನ
Modi ಮಾನನಷ್ಟ ಕೇಸ್: ತರೂರ್ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ
Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು
Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್
Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.