ಕೋವಿಡ್ ಸೋಂಕಿನಿಂದ ತಾಯಿಯ ನರಳಾಟ : ಮನನೊಂದ ಪುತ್ರ ಆಸ್ಪತ್ರೆಯಲ್ಲೇ ನೇಣಿಗೆ ಶರಣು
Team Udayavani, Apr 26, 2021, 8:10 PM IST
ಹಾಸನ : ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯ ನರಳಾಟ ಕಂಡು ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯ ಕೊರೊನಾ ವಿಭಾಗದ ಕಟ್ಟಡದಲ್ಲಿ ಸೋಮವಾರ ಬೆಳಕಿಗೆ ಬಂದಿದೆ.
ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಮಾದರೆ ಗ್ರಾಮದ ಶರತ್ ಕುಮಾರ್ (30) ಅವರು ಹಿಮ್ಸ್ ಆಸ್ಪತ್ರೆ 7ನೇ ಮಹಡಿಯಲ್ಲಿರುವ ನೀರಿನ ಟ್ಯಾಂಕ್‌ಗಳ ಪೈಪ್ ಗಳಿಗೆ ನೇಣು ಬಿಗಿದುಕೊಂಡಿದ್ದು, ಸೋಮವಾರ ಬೆಳಗ್ಗೆ ಆಸ್ಪತ್ರೆ ಸಿಬಂದಿ ಸ್ವಚ್ಛಗೊಳಿಸಲು ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಶರತ್ ಕುಮಾರ್ ಅವರು, ಕೆಲವು ದಿನಗಳ ಹಿಂದೆಯಷ್ಟೇ ಗ್ರಾಮಕ್ಕೆ ಬಂದಿದ್ದರು. 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ತಾಯಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಆಕೆ ಚೇತರಿಸಿಕೊಂಡಿಲ್ಲ. ರವಿವಾರ ರಾತ್ರಿ ಸಹೋದರ ಶಶಿಕುಮಾರ್‌ರಿಗೆ ಫೋನ್ ಮಾಡಿದ್ದ ಶರತ್, “ಅಮ್ಮ ತುಂಬಾ ನೋವು ಅನುಭವಿಸುತ್ತಿದ್ದಾರೆ. ಅದನ್ನು ನೋಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನೀನು ಆಸ್ಪತ್ರೆಗೆ ಬಂದು ಅಮ್ಮನನ್ನು ನೋಡು’ ಎಂದಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಶಶಿಕುಮಾರ್ ಆಸ್ಪತ್ರೆಗೆ ಬಂದು ಫೋನ್ ಮಾಡಿದಾಗ ಶರತ್ ಕರೆಯನ್ನು ಸ್ವೀಕರಿಸಲಿಲ್ಲ.
ಇದನ್ನೂ ಓದಿ :ಮಂಗಳೂರು ಕಾರಾಗೃಹದಲ್ಲಿ ಹಲ್ಲೆ ಪ್ರಕರಣ : ಕೇರಂ ಬೋರ್ಡ್, ಟ್ಯೂಬ್‌ಲೈಟ್‌ನಿಂದ ಆಯುಧ ತಯಾರಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಫಿನಿಕ್ಸ್ ಹಾಟ್ 12 ಪ್ಲೇ ಬಿಡುಗಡೆ : 8,499 ರೂ.ಗೆ ಮಾರುಕಟ್ಟೆಯಲ್ಲಿ ಲಭ್ಯ
ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ
ಪಾಂಡ್ಯ-ಸಂಜು ಪಡೆಗಳ ಕ್ವಾಲಿಫೈಯರ್ ಪವರ್; ಇಂದು ಗುಜರಾತ್-ರಾಜಸ್ಥಾನ್ ಮುಖಾಮುಖಿ
ಚೀನ ತಡೆಗೆ ಹೊಸ ವೇದಿಕೆ: ಅಮೆರಿಕ ನೇತೃತ್ವದಲ್ಲಿ ಐಪಿಇಎಫ್ ರಚನೆ
ಹೆಬ್ರಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಮತ್ತೆ ಸಂಕಷ್ಟ