ಕರಾವಳಿ, ಮಲೆನಾಡಿಲ್ಲಿ ವಾಡಿಕೆಗಿಂತ ಅಧಿಕ ಮಳೆ! ಕೊಡಗು: 580 ಮಿ.ಮೀ, ಉಡುಪಿ : 519 ಮಿ.ಮೀ
ಕೆಲವು ಜಿಲ್ಲೆಗಳಲ್ಲಿ ಎರಡರಿಂದ ಮೂರು ಪಟ್ಟು ಅಧಿಕ ಮಳೆ
Team Udayavani, Aug 8, 2020, 8:32 PM IST
ಬೆಂಗಳೂರು: ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಆ.1ರಿಂದ ಆ.8ರ ವರೆಗೆ ವಾಡಿಕೆಗಿಂತ ಅತ್ಯಧಿಕ ಮಳೆಯಾಗಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆ.1ರಿಂದ ಆ.8ರ ವರೆಗೆ ವಾಡಿಕೆ ಮತ್ತು ವಾಡಿಕೆಗಿಂತ ಅಧಿಕ ಮಳೆಯಾದ ವಿವರ ಈ ರೀತಿ ಇದೆ.
ಶಿವಮೊಗ್ಗದಲ್ಲಿ ಈ ಅವಧಿಯಲ್ಲಿ ವಾಡಿಕೆಯಂತೆ 186 ಮಿ.ಮೀ ಮಳೆಯಾಗಬೇಕಾಗಿತ್ತು, ಆದರೆ 347 ಮಿ.ಮೀ ಮಳೆಯಾಗಿದೆ. ಹಾಸನದಲ್ಲಿ 191 ಮಿ.ಮೀ ವಾಡಿಕೆಯಾಗಿದ್ದು, 206 ಮಿ.ಮೀ ಮಳೆಯಾಗಿದೆ. ಚಿಕ್ಕಮಗಳೂರು ವಾಡಿಕೆ 137 ಮಿ.ಮೀ ಆಗಿದ್ದು, 318 ಮಿ.ಮೀ ಮಳೆಯಾಗಿದೆ. ಕೊಡಗಿನಲ್ಲಿ 187 ಮಿ.ಮೀ ವಾಡಿಕೆಯಾಗಿದ್ದರೆ, ಇದರ ಮೂರು ಪಟ್ಟು ಅಂದರೆ 580 ಮಿ.ಮೀ ಮಳೆಯಾಗಿರುವುದು ವರದಿಯಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಡಿಕೆಯಂತೆ 276 ಮಿ.ಮೀ ಮಳೆಯಾಗಬೇಕಾಗಿತ್ತು, ಆದರೆ 462 ಮಿ.ಮೀ ಮಳೆಯಾಗಿರುವುದು ವರದಿಯಾಗಿದೆ. ಉಡುಪಿಯಲ್ಲಿ ವಾಡಿಕೆಯಂತೆ 325 ಮಿ.ಮೀ ಆಗಿದ್ದು, 519 ಮಿ.ಮೀ ಮಳೆಯಾಗಿದೆ. ಇನ್ನು ಉತ್ತರ ಕನ್ನಡದಲ್ಲಿ ವಾಡಿಕೆಯಂತೆ 232 ಮಿ.ಮೀ ಮಳೆಯಾಗಬೇಕಾಗಿದ್ದು, 482 ಮಿ.ಮೀ ಮಳೆಯಾಗಿರುವುದು ವರದಿಯಾಗಿದೆ. ಜುನ್ ಮತ್ತು ಜುಲೈ ತಿಂಗಳಲ್ಲಿ ಮಲೆನಾಡು ಹಾಗೂ ಕರಾವಳಿಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಇದೀಗ ಈ ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಅಧಿಕವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ