ಇಂದು ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳಿಂದ ಹೈಕೋರ್ಟ್ನಲ್ಲಿ ದಾವೆ
Team Udayavani, Aug 4, 2022, 6:20 AM IST
ಬೆಂಗಳೂರು: ಸಿಇಟಿ ಫಲಿತಾಂಶದ ವಿಚಾರವಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಣಯದ ವಿರುದ್ಧ 2021ನೇ ಸಾಲಿನ ಪುನರಾವರ್ತಿತ ವಿದ್ಯಾರ್ಥಿಗಳು ಗುರುವಾರ ಹೈಕೋರ್ಟ್ನಲ್ಲಿ ದಾವೆ ಹೂಡಲು ನಿರ್ಧರಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ .ಸಿ.ಎನ್. ಅಶ್ವತ್ಥ ನಾರಾಯಣ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ, 2021ನೇ ಸಾಲಿನ ಸಿಇಟಿ ಪುನರಾವರ್ತಿತ 24 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸುವುದು ಸಾಧ್ಯವಿಲ್ಲ. ಈ ವಿಷಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಸ್ಪಷ್ಟಪಡಿಸಿದ್ದರು.
ಸಿಇಟಿ-2022ರ ಫಲಿತಾಂಶವು ಜು.30ರಂದು ಪ್ರಕಟವಾಗಿದ್ದು, ಅಂದಿನಿಂದಲೂ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ ಉನ್ನತ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿ ನಡೆಸಿ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದರಿಂದ ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ಮಾತ್ರವಲ್ಲ, ಫಲಿತಾಂಶ ಪ್ರಕಟಿಸಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಲಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ