ಸರಕಾರ, ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್
Team Udayavani, Oct 18, 2022, 10:24 PM IST
ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗುವ ಎಫ್ಐಆರ್ಗಳನ್ನು 24 ಗಂಟೆಯೊಳಗೆ ವೆಬ್ಸೈಟ್ನಲ್ಲಿ ಪ್ರಕಟಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರ ಹಾಗೂ ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ವಿಚಾರವಾಗಿ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಲೋಕಾಯುಕ್ತ ಎಡಿಜಿಪಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನ. 9ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ