ಸಿಎಂ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಅರ್ಜಿ: ಹೈಕೋರ್ಟ್ ನೋಟಿಸ್
Team Udayavani, Jan 19, 2021, 7:30 PM IST
ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ, ಕಾನೂನು ಹಾಗೂ ಆರ್ಥಿಕ ಕಾರ್ಯದರ್ಶಿ ಮತ್ತು ಮಾಧ್ಯಮ ಸಲಹೆಗಾರ ಹುದ್ದೆಗಳ ನೇಮಕಾತಿ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಷಿಗಳಾದ ಎಂ.ಪಿ. ರೇಣುಕಾಚಾರ್ಯ, ಶಂಕರ್ ಗೌಡ ಐ. ಪಾಟೀಲ್, ಮಾಧ್ಯಮ ಸಂಚಾಲಕ ಜಿ.ಎಸ್. ಸುನೀಲ್, ಮಾಧ್ಯಮ ಸಲಹೆಗಾರ (ಐಟಿ, ಇ-ಆಡಳಿತ) ಬೇಳೂರು ಸುದರ್ಶನ್, ಆರ್ಥಿಕ ಸಲಹೆಗಾರರ ಲಕ್ಷ್ಮೀನಾರಾಯಣ, ಕಾನೂನು ಸಲಹೆಗಾರ ಮೋಹನ್ ಲಿಂಬಿಕಾಯಿ, ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಬಿ. ಮರಮಕಲ್ ಮತ್ತು ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್‌ಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ದಕ್ಷಿಣ ಭಾರತದಲ್ಲಿ ಇನ್ನು ಪ್ರವಾಹ ಸರ್ವೇಸಾಮಾನ್ಯ! ಅಧ್ಯಯನ ವರದಿ
ಸರಕಾರ ರಚನೆಗೆ ಸಹಕರಿಸಿರುವ ಬೆಂಬಲಿಗರನ್ನು ಮುಖ್ಯಮಂತ್ರಿಗಳು ಯಡಿಯೂರಪ್ಪ ಅವರು ತಮ್ಮ ರಾಜಕೀಯ ಮತ್ತು ಮಾಧ್ಯಮ ಸಲಹೆಗಾರರು, ಕಾರ್ಯದರ್ಶಿಗಳು ಸಹಿತ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಂಡು ಸಂಪುಟದ ದರ್ಜೆ ಸ್ಥಾನಮಾನ ನೀಡಿ ಸರಕಾರದಿಂದ ವೇತನ ಹಾಗೂ ಭತ್ತೆ ನೀಡಲಾಗುತ್ತಿದೆ. ಇಂಥ ನೇಮಕಕ್ಕೆ ಸಂವಿಧಾನ ಮತ್ತು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ರಾಜ್ಯದಲ್ಲಿ ಕೋವಿಡ್ ಕಾಟಕ್ಕೆ ಒಂದು ವರ್ಷ :ಮಾ. 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು