ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತದೆ: ಬಿ.ಕೆ.ಹರಿಪ್ರಸಾದ್

ಬಿಜೆಪಿ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ

Team Udayavani, Jun 24, 2022, 1:56 PM IST

B K HARi

ಬೆಂಗಳೂರು : ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿಯ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ ಆರ್ ಅಶೋಕ್ ಅವರೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್ ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದಾರೆ.

ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದೆಯಾ?ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್! ಎಂದು ಕಿಡಿ ಕಾರಿದ್ದಾರೆ.

ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ ಎಂದು ಸವಾಲು ಹಾಕಿದ್ದಾರೆ.

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ ಎಂದಿದ್ದಾರೆ.

ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನ , ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ, ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಿಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.