ನಾನು ಕೋವಿಡ್ ಸೋಂಕಿಗೆ ಒಳಗಾಗಿಲ್ಲ: ಟಿವಿ ವಾಹಿನಿಗಳ ವಿರುದ್ಧ ರಮೇಶ್ ಕುಮಾರ್ ಆಕ್ರೋಶ
Team Udayavani, Jan 16, 2022, 11:41 AM IST
ಬೆಂಗಳೂರು: ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ಕೋವಿಡ್ ಸೋಂಕಿಗೆ ಒಳಗಾಗಿಲ್ಲ
ಎಂದು ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಟ್ವೀಟ್ ಮಾಡಿರುವ ರಮೇಶ್ ಕುಮಾರ್, ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ಕೋವಿಡ್ ಸೋಂಕಿಗೆ ಒಳಗಾಗಿಲ್ಲ ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ಕನ್ನಡ ಸುದ್ದಿ ವಾಹಿನಿಗಳೆರಡು ನಾನು ಕೋವಿಡ್ ಪಾಸಿಟಿವ್ ಆಗಿದ್ದೇನೆ ಎಂದು ಎಂದು ಬೇಜವಾಬ್ದಾರಿಯಿಂದ ಸುದ್ದಿಗಳನ್ನು ಹರಡುತ್ತಿದ್ದಾರೆ. ಇದು ದುರದೃಷ್ಟಕರ ಮತ್ತು ದುಃಖಕರವಾಗಿದೆ ಎಂದು ಬರೆದಿದ್ದಾರೆ.
ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಕಾರ್ಜುನ ಖರ್ಗೆ ಸೇರಿದಂತೆ ಕೋವಿಡ್ ಪಾಸಿಟಿವ್ ಆಗಿ ಚೇತರಿಸಿಕೊಳ್ಳುತ್ತಿದ್ದಾರೆ.