
ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು
Team Udayavani, Mar 27, 2023, 4:09 PM IST

ಮುಂಬಯಿ: ರಾಹುಲ್ ಗಾಂಧಿ ಅವರು ಸಾವರ್ಕರ್ ಅಲ್ಲದ ಕಾರಣ ಕ್ಷಮೆ ಕೇಳುವುದಿಲ್ಲ ಎಂದು ಹೇಳುತ್ತಿದ್ದಾರೆ, ಸಾವರ್ಕರ್ ಅವರು ಕ್ಷಮೆಯಾಚಿಸಿದ್ದಾರೆ ಎಂಬುದನ್ನು ತೋರಿಸುವ ದಾಖಲೆಗಳನ್ನು ತೋರಿಸಲು ನಾನು ಅವರಿಗೆ ಸವಾಲು ಹಾಕುತ್ತೇನೆ ಎಂದು ವಿಡಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಸೋಮವಾರ ಸವಾಲು ಹಾಕಿದ್ದಾರೆ.
ವ್ಯತಿರಿಕ್ತವಾಗಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಗೆ ಎರಡು ಬಾರಿ ಕ್ಷಮೆಯಾಚಿಸಿದ್ದಾರೆ. ರಾಹುಲ್ ಗಾಂಧಿ ಏನು ಮಾಡಿದರೂ ಬಾಲಿಶ. ರಾಜಕೀಯ ಪ್ರಚಾರಕ್ಕೆ ದೇಶಭಕ್ತರ ಹೆಸರು ಬಳಸುವುದು ಶೋಚನೀಯ ಎಂದು ರಂಜಿತ್ ಸಾವರ್ಕರ್ ಕಿಡಿ ಕಾರಿದ್ದಾರೆ.
ಇದನ್ನೂ ಓದಿ: ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ
ನಾನು ಸಾವರ್ಕರ್ ಅಲ್ಲ, ನಾನು ಗಾಂಧಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ . ಈ ಕಾರಣಕ್ಕಾಗಿ ಸೋಮವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯಲಿರುವ ಸಭೆಗೆ ಹಾಜರಾಗದಿರಲು ಉದ್ಧವ್ ಠಾಕ್ರೆ ಬಣ ನಿರ್ಧರಿಸಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿಕೆ ನೀಡಿದ್ದಾರೆ.
ಇನ್ನೊಂದೆಡೆ ಮಾಹಾರಾಷ್ಟ್ರ ದಲ್ಲೂ ರಾಹುಲ್ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಪರ ಸಂಘಟನೆಗಳು ಕಿಡಿ ಕಾರಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
