ಮತ್ತೆ ಸಿಎಂ ಆಗುವ ಆಸೆ ಇಲ್ಲ : ವಿಧಾನಸಭೆಯಲ್ಲಿ ಬಿಎಸ್ ವೈ ರೋಷದ ಮಾತು
ಬೊಮ್ಮಾಯಿ ನೇತೃತ್ವದ ಲ್ಲೇ ನಾವು ಚುನಾವಣೆ ಎದುರಿಸುತ್ತೇವೆ
Team Udayavani, Mar 11, 2022, 12:31 PM IST
ಬೆಂಗಳೂರು : ನನಗೆ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇಲ್ಲ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಾವು ಚುನಾವಣೆ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಅವರು, ನನ್ನನ್ನು ಯಾರೂ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿಲ್ಲ. ಸ್ವಯಂಪ್ರೇರಣೆಯಿಂದ ನಾನೇ ರಾಜೀನಾಮೆ ನೀಡಿದ್ದೇನೆ. ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ನಮಗಿಲ್ಲ. ನಾನು ಆ ಹುದ್ದೆಯನ್ನು ನೋಡಿ ಆಗಿದೆ ಎಂದು ಹೇಳಿದರು.
ಬಸವರಾಜ್ ಬೊಮ್ಮಾಯಿ ಅವರ ಬಜೆಟ್ ಅನ್ನು ಹಿಡಿದುಕೊಂಡು ನಾವು ಜನರ ಬಳಿಗೆ ಹೋಗುತ್ತೇವೆ. ನೀವು ಬನ್ನಿ. ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡೋಣ ಎಂದು ಸವಾಲು ಹಾಕಿದರು.
ನನಗೆ ನಿಮ್ಮ ಸ್ಥಿತಿ ನೋಡಿದರೆ ದುಃಖವಾಗುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟವಾಗುವುದರಲ್ಲಿ ಅನುಮಾನವೇ ಬೇಡ. ನೀವು ಮತ್ತೆ ವಿಪಕ್ಷ ನಾಯಕನಾದರೆ ಕಾಂಗ್ರೆಸ್ ಸೋಲುವುದು ನೂರಕ್ಕೆ ನೂರು ಸತ್ಯ ಎಂದು ಹೇಳಿದರು.
ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಉಸಿರಾಡುತ್ತಿದೆ. ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಗೆ ನಾಯಕರೇ ಇಲ್ಲ. ನಿಮ್ಮ ಪಕ್ಷಕ್ಕೆ ಅಡ್ರೆಸ್ ಎಲ್ಲಿದೆ ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್