ಕಚೇರಿಗೆ ಬರುತ್ತಿದ್ದರೆ…ದಯವಿಟ್ಟು ಮನೆಗೆ ವಾಪಸ್ ಹೋಗಿ: ಉದ್ಯೋಗಿಗಳಿಗೆ ಟ್ವಿಟರ್ ಇ-ಮೇಲ್!

ನೂತನ ಮಾಲೀಕ ಮಸ್ಕ್ ಆಡಳಿತದಲ್ಲಿ ಕಂಪನಿಯ ಭವಿಷ್ಯ ತೂಗುಯ್ಯಾಲೆಯಂತಾಗಿದೆ

Team Udayavani, Nov 4, 2022, 2:26 PM IST

thumb-1

ವಾಷಿಂಗ್ಟನ್: ವಿಶ್ವದ ಜನಪ್ರಿಯ ಸಾಮಾಜಿಕ ಜಾಲತಾಣ ಟ್ವಿಟರ್ ಜಗತ್ತಿನ ನಂ. ವನ್ ಶ್ರೀಮಂತ ಎಲಾನ್ ಮಸ್ಕ್ ತೆಕ್ಕೆಗೆ ಹೋದ ಬಳಿಕ ಹಲವಾರು ಬದಲಾಣೆಗೆ ಕಾರಣವಾಗಿದೆ. ಆರಂಭದಲ್ಲೇ ಟ್ವಿಟರ್ ಸಿಇಒ ಪರಾಗ್ ಸೇರಿದಂತೆ ಹಲವು ಉನ್ನತ ಹುದ್ದೆಯಲ್ಲಿದ್ದವರನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ಇದೀಗ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಪೋಷಕಾಂಶಗಳ ಉಗ್ರಾಣ…ಉತ್ತಮ ಆರೋಗ್ಯಕ್ಕೆ ಹರಿವೆ ಸೊಪ್ಪು ಬಳಸಿ

“ಟ್ವಿಟರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಶುಕ್ರವಾರ (ನವೆಂಬರ್ 04) ಇ-ಮೇಲ್ ರವಾನಿಸಲಾಗಿದ್ದು, ಕೆಲಸದಿಂದ ವಜಾಗೊಳಿಸುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಉದ್ಯೋಗಿಗಳು ಕಚೇರಿ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಇದರಿಂದಾಗಿ ನೂತನ ಮಾಲೀಕ ಮಸ್ಕ್ ಆಡಳಿತದಲ್ಲಿ ಕಂಪನಿಯ ಭವಿಷ್ಯ ತೂಗುಯ್ಯಾಲೆಯಂತಾಗಿದೆ ಎಂದು ವರದಿ ವಿವರಿಸಿದೆ.

“ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆ” ಶುಕ್ರವಾರ ಮಧ್ಯಾಹ್ನದಿಂದ ಆರಂಭವಾಗಲಿದೆ ಎಂದು ಟ್ವಿಟರ್ ಸಂಸ್ಥೆ ಉದ್ಯೋಗಿಗಳಿಗೆ ಕಳುಹಿಸಿರುವ ಇ-ಮೇಲ್ ನಲ್ಲಿ ತಿಳಿಸಿದೆ.  ಜಾಗತಿಕ ಮಟ್ಟದಲ್ಲಿ ಕಂಪನಿಯ ಉದ್ಯೋಗಿಗಳನ್ನು ಕಡಿತಗೊಳಿಸುವ ಕಠಿಣ ಪ್ರಕ್ರಿಯೆ ನಡೆಸುತ್ತಿರುವುದಾಗಿ ತಿಳಿಸಿದೆ.

ಯಾರು ಕೆಲಸ ಕಳೆದುಕೊಳ್ಳಲಿದ್ದಾರೆ, ಯಾರು ಉದ್ಯೋಗದಲ್ಲಿ ಮುಂದುವರಿಯಲಿದ್ದಾರೆ ಎಂಬುದನ್ನು ವೈಯಕ್ತಿಕವಾಗಿ ಇ-ಮೇಲ್ ಮೂಲಕ ಮಾಹಿತಿ ರವಾನಿಸಲಾಗುವುದು ಎಂದು ತಿಳಿಸಿದೆ. ವರದಿಯ ಪ್ರಕಾರ ಸುಮಾರು 4,000ಕ್ಕೂ ಅಧಿಕ ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

“ಒಂದು ವೇಳೆ ನೀವು ಕಚೇರಿಯಲ್ಲಿದ್ದರೆ…ಅಥವಾ ಕಚೇರಿಗೆ ಬರುವ ಮಾರ್ಗದಲ್ಲಿದ್ದರೆ…ದಯವಿಟ್ಟು ಮನೆಗೆ ವಾಪಸ್ ತೆರಳಿ”. ಉದ್ಯೋಗಿಗಳನ್ನು ಕಡಿತಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದ್ದು, ನಿಮಗೆ ನಿಮ್ಮ ಉದ್ಯೋಗದ ಬಗ್ಗೆ ಮುಂದಿನ ಇ-ಮೇಲ್ ನಲ್ಲಿ ಸಂದೇಶ ರವಾನಿಸಲಾಗುವುದು” ಎಂದು ಇ-ಮೇಲ್ ನಲ್ಲಿ ತಿಳಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.