ಹಿಜಾಬ್ ಧರಿಸಿ ಬಂದರೆ, ನಾವು ಕೇಸರಿ ಶಲ್ಯ ಹಾಕಿಕೊಂಡು ಬರುತ್ತೇವೆ
Team Udayavani, Feb 7, 2022, 12:34 PM IST
ಮಡಿಕೇರಿ: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಸೃಷ್ಟಿಯಾಗಿರುವ ಹಿಜಾಬ್ ವಿವಾದ ಮಡಿಕೇರಿಗೂ ವ್ಯಾಪಿಸಿದೆ. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು ಇಂದು ಕೇಸರಿ ಶಲ್ಯದೊಂದಿಗೆ ಆಗಮಿಸುವ ಮೂಲಕ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ಕ್ರಮವನ್ನು ವಿರೋಧಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದು ಖಡ್ಡಾಯವಾಗಿದ್ದು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರೆ ನಾವು ಕೂಡ ಕೇಸರಿ ಶಲ್ಯ ಹಾಕಿಕೊಂಡೇ ಬರುತ್ತೇವೆ ಎಂದರು.
ಸುಮಾರು 30 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ. ಇಂದು ನಾವು 50 ಕ್ಕೂ ಹೆಚ್ಚು ಮಂದಿ ಕೇಸರಿ ಶಲ್ಯ ಹಾಕಿಕೊಂಡು ಬಂದಿದ್ದೇವೆ. ನಾಳೆಯಿಂದ ಎಲ್ಲರೂ ಹಾಕುತ್ತೇವೆ ಎಂದು ತಿಳಿಸಿದರು.
ಪ್ರಾಂಶುಪಾಲರಾದ ಡಾ.ಜಗತ್ ತಿಮ್ಮಯ್ಯ ಮಾತನಾಡಿ ವಿದ್ಯಾರ್ಥಿಗಳ ಮನವೊಲಿಸುವ ಕಾರ್ಯ ಮಾಡಿದ್ದೇವೆ, ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿದೆ. ಆದರೆ ನಮ್ಮ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಇನ್ನೂ ಸಮವಸ್ತ್ರ ಹಂಚಿಕೆಯಾಗಿಲ್ಲ. ಸಮವಸ್ತ್ರ ಬಂದ ನಂತರ ಸರ್ಕಾರದ ನಿಯಮವನ್ನು ಪಾಲಿಸಲಾಗುವುದು. ನಿಯಮ ಮೀರಿ ವಿದ್ಯಾರ್ಥಿಗಳು ನಡೆದುಕೊಂಡರೆ ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ
ಸಿದ್ದರಾಮಯ್ಯರಿಗೆ ಮಡಿಕೇರಿಯಲ್ಲೂ ಪ್ರತಿಭಟನೆಯ ಬಿಸಿ: ಕಾಂಗ್ರೆಸ್ ನಿಂದ ಪ್ರತಿರೋಧ
ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ
ಶ್ರೀಗಂಧದ ಮರ ಕಡಿದ ಆರೋಪಿ ಸೆರೆ; ಮತ್ತೊಬ್ಬ ಪರಾರಿ
ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖ : ಮುಂದುವರಿದ ಗುಡ್ಡ ಕುಸಿತ