ಸತ್ತರೆ ಶಿಗ್ಗಾವಿ ಮಣ್ಣಲ್ಲೇ ಅಂತ್ಯಸಂಸ್ಕಾರ ಮಾಡಿ: CM ಬೊಮ್ಮಾಯಿ

ಮತದಾರರಿಗೆ ಭಾವುಕರಾಗಿ ಮನವಿ ಮಾಡಿದ ಬೊಮ್ಮಾಯಿ

Team Udayavani, Apr 20, 2023, 7:32 AM IST

bommayi bjp

ಹಾವೇರಿ: ಬಿಜೆಪಿ ಮೇ 13ರಂದು 125ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅ ಧಿಕಾರಕ್ಕೆ ಬರಲಿದೆ. ಮತ್ತೆ ಕನ್ನಡ ಮಾತೆಯ ಸೇವೆ ಮಾಡಲಿದೆ. ನನ್ನ ಸಾವಾದರೆ ಶಿಗ್ಗಾವಿ ಮಣ್ಣಿನಲ್ಲೇ ಅಂತ್ಯಸಂಸ್ಕಾರ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ನೆರೆದಿದ್ದ ಜನರಿಗೆ ಭಾವುಕರಾಗಿ ಹೇಳಿದರು.

ಜಿಲ್ಲೆಯ ಶಿಗ್ಗಾವಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್‌ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿತ್ತು. ಮೂಲ ಸೌಕರ್ಯದ ಕೊರತೆ, ನೀರಿನ ಸಮಸ್ಯೆ ವ್ಯಾಪಕವಾಗಿತ್ತು. ಕ್ಷೇತ್ರದಲ್ಲಿ 2 ಏತ ನೀರಾವರಿ ಯೋಜನೆ ಅನುಷ್ಠಾನದ ಮೂಲಕ 100ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲಾಗಿದೆ. ಗ್ರಾಮೀಣ, ಜಿಲ್ಲಾ ರಸ್ತೆ, ರಾಜ್ಯ, ರಾಷ್ಟ್ರೀಯ ಹೆದ್ದಾರಿ ಸೇರಿ 2 ಸಾವಿರ ಕಿ.ಮೀ. ರಸ್ತೆಗಳ ನಿರ್ಮಾಣವಾಗಿದೆ ಎಂದರು.
ಬಡತನ ಶಾಪವಲ್ಲ. ಸಾಯುವವರೆಗೆ ಬಡತನ ಇರಬೇಕಿಲ್ಲ. ಪ್ರಾಮಾಣಿಕತೆಯಿಂದ ದುಡಿಯಲು ಅವಕಾಶ ಕೊಟ್ಟಿದ್ದೇವೆ. ಈ ಭಾಗದಲ್ಲಿ ಅತಿ ಹೆಚ್ಚು ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಶಹರಗಳ ಸಂಪೂರ್ಣ ಅಭಿವೃದ್ಧಿ, ಪ್ರತಿ ಮನೆಗೆ ನಳದಿಂದ ನೀರು ಕೊಡುತ್ತಿದ್ದೇವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಜಲಜೀವನ್‌ ಮಿಷನ್‌ ಅಡಿ ಎಲ್ಲ ಹಳ್ಳಿಗಳಿಗೂ ನೀರಿನ ಸೌಕರ್ಯ ಕೊಡುತ್ತಿದೆ. ಹೀಗಾಗಿ ಅಭಿವೃದ್ಧಿಗಾಗಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ಬೊಮ್ಮಾಯಿ ಮಾಮಗೆ ಬೆಂಬಲ ನೀಡಿ
ಚಿತ್ರನಟ ಕಿಚ್ಚ ಸುದೀಪ್‌ ಮಾತನಾಡಿ, ಜನಮನ ಗೆದ್ದ ಸಿಎಂ ಬೊಮ್ಮಾಯಿ ಮಾಮಗೆ ಕೆಲಸ ಮಾಡಲು ಇನ್ನಷ್ಟು ಸಮಯ ಬೇಕಿದೆ. ಜನರ ಒಳಿತಿಗಾಗಿ ಅವರನ್ನು ಬೆಂಬಲಿಸಬೇಕು. ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿ ಕೆಲಸಗಳನ್ನು ಮೆಚ್ಚುತ್ತೇನೆ. ನಿಮ್ಮ ನಂಬಿಕೆ ಇದ್ದರೆ ಕೆಲಸ ಚೆನ್ನಾಗಿ ಆಗುತ್ತದೆ. “ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇ ಬೇಕು ಒಳ್ಳೆತನ’ ಹಾಡನ್ನು ಉದಾಹರಿಸಿದರು.

ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ
ಜೀವನದ ಕೊನೆ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ಕ್ಷೇತ್ರ ಬದಲಿಸುವ, ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ. ಏನೇ ಆದರೂ ನನ್ನ ಜನರ ಮುಂದೆ ತೀರ್ಮಾನ ಆಗಬೇಕು. ನೀವೇ ಮಾಲಕರು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಮ್‌ ಕೆ ವಾಸ್ತೆ ಅಲ್ಲ ಕಾಮ್‌ ಕೆ ವಾಸ್ತೆ ಸಿಎಂ: ಸುದೀಪ್‌
ಸುಂದರವಾಗಿ ಸುಸ್ವಾಗತ ನೀಡಿ ಪ್ರೀತಿ ತೋರಿದ್ದೀರಿ. ಬೊಮ್ಮಾಯಿ ಮಾಮ ಅವರು ಕಡಿಮೆ ಅವ ಧಿಯಲ್ಲಿ ತುಂಬಾ ಕೆಲಸ ಮಾಡಿದ್ದಾರೆ. ಇವರು ನಾಮ್‌ ಕೆ ವಾಸ್ತೆ ಅಲ್ಲ, ಕಾಮ್‌ ಕೆ ವಾಸ್ತೆ ಸಿಎಂ ಎಂದು ನಾಯಕ ನಟ ಕಿಚ್ಚ ಸುದೀಪ ಹೇಳಿದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.