ಡಿಸಿ ಕಚೇರಿ ಮುಂದೆ ಅನುಚಿತ ವರ್ತನೆ: ಮಹಿಳೆ ಬಂಧನ


Team Udayavani, May 5, 2022, 2:27 PM IST

10women

ಕಲಬುರಗಿ: ಪ್ರಕರಣವೊಂದರ ವಿಚಾರಣೆ ನಡೆಸದಂತೆ ಕಲಬುರಗಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿಗಳಿಗೆ ನೋಟಿಸ್‌ ನೀಡಿದ್ದಲ್ಲದೆ, ಕಚೇರಿ ಮುಂದೆ ಅನುಚಿತವಾಗಿ ವರ್ತಿಸಿ, ರಂಪಾಟ ಮಾಡಿದ ಮಹಿಳೆಯೋರ್ವಳನ್ನು ಬುಧವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ.

ಸಪ್ನಾ ಪೊಲೀಸರು ಬಂಧಿಸಿರುವ ಮಹಿಳೆ.

ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಅನಿಯಮ-2007ರ ಕಲಂ 16ರ ಅಡಿ ಸಲ್ಲಿಸಲಾಗಿರುವ ಮೇಲ್ಮನವಿಗೆ ಬುಧವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಚಾರಣೆಗೆ ಮಹಿಳೆ ಹಾಜರಾಗಿದ್ದರು.

ಈ ಸಂದರ್ಭದಲ್ಲಿ 30 ದಿನಗಳ ಕಾಲ ಮೇಲ್ಮನವಿಯ ವಿಚಾರಣೆ ಮಾಡಬಾರದು ಹಾಗೂ ಸದರಿ ಪ್ರಕರಣವನ್ನು ಬೇರೊಂದು ಪ್ರಕಾರಕ್ಕೆ ವರ್ಗಾಯಿಸಬೇಕೆಂದು ಜಿಲ್ಲಾ ದಂಡಾಕಾರಿಗಳಿಗೆ ನೋಟೀಸ್‌ ನೀಡಿದ್ದರು. ಜೊತೆಗೆ ನನ್ನ ವಿರುದ್ಧ ತೀರ್ಪು ನೀಡುತ್ತೀರಿ ಎಂದೆಲ್ಲಾ ಮಹಿಳೆ ಕಚೇರಿ ಮುಂದೆ ರಂಪಾಟ ಮಾಡಿದ್ದರಿಂದ ಪ್ರಕರಣ ದಾಖಲಿಸಿ, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್‌ ವಿ. ಗುರುಕರ್‌ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣದ ಹಿನ್ನೆಲೆ: ಶಿವಶರಣಪ್ಪ ತಂದೆ ಶಿವಲಿಂಗಪ್ಪ ಮಂಗಲಗಿ ಅವರು ತನ್ನ ಮಗ ರಾಜಶೇಖರ ತಂದೆ ಶಿವಶರಣಪ್ಪ ಮಂಗಲಗಿ ಹಾಗೂ ಈತನ ಪತ್ನಿ ಸಪ್ನಾ ಅವರು ತನ್ನನ್ನು ಹಾಗೂ ತನ್ನ ಪತ್ನಿಯನ್ನು ಪೋಷಣೆ ಮಾಡುತ್ತಿಲ್ಲ. ಆಳಂದ ರಸ್ತೆಯ ವಿಜಯ ನಗರ ಕಾಲೋನಿಯಲ್ಲಿ ಇರುವ ಸ್ವ-ಅರ್ಜಿತ ಮನೆಯನ್ನು ಸೊಸೆ ಮತ್ತು ಮಗ ಕಬ್ಜಾ ಮಾಡಿಕೊಂಡಿದ್ದು, ತನಗೆ ವಹಿಸಿಕೊಡುವಂತೆ ಹಿರಿಯ ನಾಗರಿಕರ ನಿರ್ವಹಣಾ ಮಂಡಳಿಯ ಅಧ್ಯಕ್ಷರೂ ಆಗಿರುವ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.

ಈ ನಡುವೆ ದಿನಾಂಕ: 28-12-2013 ರಂದು ಕಲಬುರಗಿ ಕುಟುಂಬ ನ್ಯಾಯಾಲಯದಲ್ಲಿ ಸಪ್ನಾ ಮತ್ತು ಗಂಡ ರಾಜಶೇಖರ ಮಂಗಲಗಿ ಅವರು ವಿಚ್ಛೇದನ ಪಡೆದಿರುತ್ತಾರೆ. ಕಲಬುರಗಿ ನ್ಯಾಯಾಲಯ ವಿಚ್ಛೇದನ ನೀಡಿರುವ ಹಿನ್ನೆಲೆಯಲ್ಲಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಕಲ್ಯಾಣ ಅನಿಯಮ 2007ರ ಕಲಂ 9ರ ಅಡಿ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು, ಅನಧಿಕೃತವಾಗಿ ಕಬ್ಜಾ ಮಾಡಿರುವ ಮನೆಯನ್ನು ಮನವಿದಾರರರಾದ ಶಿವಶರಣಪ್ಪ ತಂದೆ ಶಿವಲಿಂಗಪ್ಪ ಮಂಗಲಗಿ ಅವರಿಗೆ ಹಸ್ತಾಂತರಿಸುವಂತೆ ದಿನಾಂಕ: 20-01-2020 ರಂದು ಆದೇಶ ನೀಡಿರುತ್ತಾರೆ.

ಈ ನಡುವೆ ಶಿವಶರಣಪ್ಪ ತಂದೆ ಶಿವಲಿಂಗಪ್ಪ ಮಂಗಲಗಿ ಅವರು ತನ್ನ ಸ್ವ-ಅರ್ಜಿತ ಮನೆಯನ್ನು ತಮ್ಮ ಧರ್ಮಪತ್ನಿ ಪುಷ್ಪಾವತಿ ಅವರಿಗೆ ನೀಡಬೇಕೆಂದು 2019ರಲ್ಲಿ ವಿಲ್‌ ಪತ್ರ ಬರೆದು 2020ರಲ್ಲಿ ನಿಧನ ಹೊಂದಿರುತ್ತಾರೆ. ಕಲಬುರಗಿ ಸಹಾಯಕ ಆಯುಕ್ತರು 20-01-2020 ರಂದು ಆದೇಶ ನೀಡಿದ್ದರೂ ಸಪ್ನಾ ಗಂಡ ರಾಜಶೇಖರ ಮಂಗಲಗಿ ಅವರು ಮನೆಯನ್ನು ತನ್ನ ಅತ್ತೆಯಾದ ಪುಷ್ಪಾವತಿ ಅವರಿಗೆ ವಹಿಸದೇ ಅನಧಿಕೃತವಾಗಿ ತಾನೇ ವಾಸವಾಗಿದ್ದಲ್ಲದೆ, ಕಲಬುರಗಿ ಉಪ ವಿಭಾಗೀಯ ದಂಡಾಧಿಕಾರಿಗಳು ಮತ್ತು ಸಹಾಯಕ ಆಯುಕ್ತರ ಆದೇಶದ ವಿರುದ್ಧ ಜಿಲ್ಲಾ ದಂಡಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.