ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಸ್ವಾಗತಾರ್ಹ


Team Udayavani, Jun 8, 2023, 5:54 AM IST

kharif crops

ದೇಶದಲ್ಲಿ ಮುಂದಿನ ಖಾರಿಫ್ ಅವಧಿಯಲ್ಲಿ ಏಕದಳ ಮತ್ತು ದ್ವಿದಳ ಧಾನ್ಯ ಬೆಳೆಗಳಲ್ಲಿ ವೈವಿಧ್ಯತೆಯನ್ನು ಸಾಧಿಸಲು ಮತ್ತು ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ನಡೆಸುವಂತೆ ರೈತರನ್ನು ಪ್ರೇರೇಪಿಸುವ ದೃಷ್ಟಿಯಿಂದ ಕೇಂದ್ರ ಸರಕಾರ ಮುಂಗಾರು ಆರಂಭಕ್ಕೂ ಮುನ್ನವೇ ಮುಂಬರುವ ಸಾಲಿನ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಕೃಷಿ ಬೆಳೆಗಳ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸುಗಳನ್ನು ಆಧರಿಸಿ ಸರಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಈ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 2,040 ರೂ.ಗಳಿಂದ 2,183ರೂ.ಗಳಿಗೆ ಹೆಚ್ಚಿಸಲಾಗಿದೆ. ಎ ಗ್ರೇಡ್‌ ತಳಿಗೆ ಕ್ವಿಂ.ಗೆ 2,060ರೂ.ಗಳಿಂದ 2,203 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಬಾಜ್ರಾಗೆ ಪ್ರತೀ ಕ್ವಿಂ.ಗೆ 2,350 ರೂ.ಗಳಿಂದ 2,500ರೂ. ಗಳಿಗೆ ಮತ್ತು ರಾಗಿಗೆ ಕ್ವಿಂ.ಗೆ 3,578 ರೂ.ಗಳಿಂದ 3,846 ರೂ.ಗಳಿಗೆ ಹೆಚ್ಚಿಸಲಾಗಿದೆ. ದ್ವಿದಳ ಧಾನ್ಯಗಳ ಕನಿಷ್ಠ ಬೆಂಬಲ ಬೆಲೆಯನ್ನು ಕೂಡ ಹೆಚ್ಚಿಸುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರಕಾರ ತೊಗರಿಗೆ ಕ್ವಿಂ.ಗೆ 6,600ರಿಂದ 7,000ರೂ.ಗಳಿಗೆ, ಹೆಸರು ಕಾಳಿಗೆ ಕ್ವಿಂ.ಗೆ 7,755ರಿಂದ 8,558 ರೂ.ಗಳಿಗೆ ಹಾಗೂ ಉದ್ದಿಗೆ ಕ್ವಿಂ.ಗೆ 6,600ರಿಂದ 6,650 ರೂ.ಗಳಿಗೆ ಹೆಚ್ಚಿಸಲಾಗಿದೆ.

ಮುಂಬರುವ ಮುಂಗಾರು ಅವಧಿಯಲ್ಲಿ ಬೆಳೆಯಲಾಗುವ ಈ ಬೆಳೆಗಳನ್ನು ಸರಕಾರವು ಏಜೆನ್ಸಿಗಳ ಮೂಲಕ ರೈತರಿಂದ ನಿಗದಿಪಡಿಸಿದ ಕನಿಷ್ಠ ಬೆಲೆಗೆ ಖರೀದಿಸಲಿದೆ. ಆ ಮೂಲಕ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ರೈತರು ಸಂಕಷ್ಟಕ್ಕೀಡಾಗುವುದು ತಪ್ಪಲಿದೆ. ಇದರಿಂದ ದೇಶದಲ್ಲಿ ಆಹಾರ ಧ್ಯಾನ್ಯಗಳ ಉತ್ಪಾದನ ಪ್ರಮಾಣ ವೃದ್ಧಿಯಾಗುವುದರ ಜತೆಯಲ್ಲಿ ರೈತರು ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗಲಿದೆ. ದೇಶದ ಕೃಷಿ ವಲಯವು ಬಹುತೇಕ ಮಳೆಯಾಶ್ರಿತವಾಗಿರುವುದರಿಂದ ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳ ಉತ್ಪಾದನೆಗೆ ಹೆಚ್ಚಿನ ಮಹತ್ವವಿದೆ. ಇದು ಕೇವಲ ಆಹಾರ ಉತ್ಪಾದನೆ ಮಾತ್ರವಲ್ಲದೆ ದೇಶದ ಆರ್ಥಿಕತೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಪ್ರಸಕ್ತ ಸಾಲಿನಲ್ಲಿ ಅಂದರೆ 2022-23ನೇ ಸಾಲಿನಲ್ಲಿ ದೇಶದಲ್ಲಿ ದಾಖಲೆಯ 330.5 ಮಿಲಿಯನ್‌ ಟನ್‌ಗಳಷ್ಟು ಆಹಾರ ಬೆಳೆಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು 14.9 ಮಿಲಿಯನ್‌ ಟನ್‌ಗಳಷ್ಟು ಅಧಿಕವಾಗಿದೆ. ಕಳೆದ 5 ವರ್ಷಗಳಲ್ಲಿಯೇ ಗರಿಷ್ಠ ಏರಿಕೆಯಾಗಿದೆ.

ಇದೇ ವೇಳೆ ಈ ಬಾರಿ ಮುಂಗಾರು ಮಳೆ ಕೊಂಚ ವಿಳಂಬಗೊಂಡಿದ್ದು ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಕೇರಳವನ್ನು ನೈಋತ್ಯ ಮಾರುತಗಳು ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಜೂನ್‌-ಸೆಪ್ಟಂಬರ್‌ ಅವಧಿಯಲ್ಲಿ ಎಲ್‌ ನಿನೋ ಮುಂಗಾರು ಮಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆಯಾದರೂ ಒಟ್ಟಾರೆ ದೇಶದಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಆಶಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಬಾರಿಯೂ ಆಹಾರ ಬೆಳೆಗಳ ಸಹಿತ ಕೃಷಿ ಉತ್ಪಾದನ ಪ್ರಮಾಣದಲ್ಲಿ ಹೆಚ್ಚೇನೂ ಏರಿಳಿತ ಕಾಣಲಾರದು ಎಂದು ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme court

Supreme Court: ಸುಪ್ರೀಂ ಎಚ್ಚರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿ

river…

Cauvery: ಎರಡೆರಡು ಬಂದ್‌ ಸರಿಯಾದ ನಿರ್ಧಾರವಲ್ಲ

terrorism

Terrorism: ಉಗ್ರರ ಆಸ್ತಿ ಜಪ್ತಿ: ಭಾರತದಿಂದ ವಿಶ್ವರಾಷ್ಟ್ರಗಳಿಗೆ ಎಚ್ಚರಿಕೆಯ ಕರೆಗಂಟೆ

asiad india

Asiad: ಏಷ್ಯಾಡ್‌ನಿಂದ ಭಾರತದ ಕ್ರೀಡಾಚಹರೆ ಬದಲಾಗುವ ಭರವಸೆ

krs

Cauvery ಅನ್ಯಾಯ: ಪರಿಹಾರ ಸೂತ್ರ ಬೇಕೇ ಬೇಕು

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

h d kumaraswamy

NICE: ನೈಸ್‌ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್‌ ಹೋರಾಟ:ಕುಮಾರಸ್ವಾಮಿ

high court karnataka

High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ

devegouda

Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.