ಭಾರತ- ಬಾಂಗ್ಲಾ ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಹೆಜ್ಜೆ : 5 ಒಪ್ಪಂದಗಳಿಗೆ ಸಹಿ
Team Udayavani, Mar 28, 2021, 7:10 AM IST
ಢಾಕಾ: ಪ್ರಧಾನಿ ಮೋದಿ ಅವರ ಬಾಂಗ್ಲಾದೇಶ ಪ್ರವಾಸದ 2ನೇ ಮತ್ತು ಕೊನೆಯ ದಿನವಾದ ಶನಿವಾರ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯ ನಿಟ್ಟಿನಲ್ಲಿ ಭಾರತ ಮತ್ತು ಬಾಂಗ್ಲಾ 5 ಒಪ್ಪಂದಗಳಿಗೆ ಸಹಿ ಹಾಕಿವೆ.
ಸಂಪರ್ಕ, ವಾಣಿಜ್ಯ, ಮಾಹಿತಿ ತಂತ್ರಜ್ಞಾನ ಮತ್ತು ಕ್ರೀಡೆಗೆ ಸಂಬಂಧಿಸಿದ ಒಪ್ಪಂದಗಳು ಇವು ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಕೊರೊನಾ ಸೋಂಕು ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ವಿದೇಶ ಪ್ರವಾಸ ಮಾಡಿರುವ ಪ್ರಧಾನಿ ಮೋದಿ ಅವರು ಶನಿವಾರ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರೊಂದಿಗೆ ದ್ವಿಪಕ್ಷೀಯ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.
ದೇಗುಲಗಳಿಗೆ ಭೇಟಿ
ಇದಕ್ಕೂ ಮುನ್ನ ಶನಿವಾರ ಪ್ರಧಾನಿ ಮೋದಿ ಅವರು ಒರಾಕಂಡಿಯಲ್ಲಿ ಮತುವಾ ಸಮುದಾಯದ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಬಳಿಕ ಆ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು. 51 ಶಕ್ತಿಪೀಠಗಳಲ್ಲಿ ಒಂದಾದ ಜೇಶೋರೇಶ್ವರಿ ಕಾಳಿ ದೇಗುಲದಲ್ಲೂ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ